ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರ ವೇದಿಕೆ (ಎಫ್‌ಐಪಿಐಸಿ) ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪಪುವಾ ನ್ಯೂಗಿನಿಯಾಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ದೊರೆಯಿತು. ಪಪುವಾ ನ್ಯೂಗಿನಿಯಾ ಪ್ರಧಾನಿ ಜೇಮ್ಸ್ ಮರಾಪೆ ಅವರು ನರೇಂದ್ರ ಮೋದಿಯವರ ಪಾದ ಮುಟ್ಟಿ ನಮಸ್ಕರಿಸಿದರು.
ಸೂರ್ಯಾಸ್ತದ ನಂತರ ದೇಶಕ್ಕೆ ಆಗಮಿಸುವ ಯಾವುದೇ ನಾಯಕರಿಗೆ ಇಂತಹ ಸ್ವಾಗತ ನೀಡುವುದು ವಾಡಿಕೆಯಲ್ಲದಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಕಲ ವಿಧಿವಿಧಾನಗಳೊಂದಿಗೆ ಪಪುವಾ ನ್ಯೂಗಿನಿಯಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪಪುವಾ ನ್ಯೂಗಿನಿಯಾದಲ್ಲಿ ಚೀನಾದ ಪ್ರಭಾವವನ್ನು ಬೀರುವ ಪ್ರಯತ್ನಗಳಿಗೆ ಪ್ರಬಲ ಪ್ರತಿರೋಧದ ನಡುವೆ ಪ್ರಧಾನಿಯವರು ಪಪುವಾ ನ್ಯೂಗಿನಿಯಾಕ್ಕೆ ಇದು ಮೊದಲ ಭೇಟಿಯಾಗಿದೆ. ಜಪಾನ್‌ನಲ್ಲಿ ನಡೆದ ಜಿ-7 ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಮೋದಿ ಪಪುವಾ ನ್ಯೂಗಿನಿಯಾಗೆ ಆಗಮಿಸಿದರು.
ಪಪುವಾ ನ್ಯೂಗಿನಿಯಾದ ಪೋರ್ಟ್ ಮೊರೆಸ್ಬಿ ವಿಮಾನ ನಿಲ್ದಾಣದಲ್ಲಿ ಮೋದಿ ಬಂದಿಳಿದಾಗ ಪಪುವಾ ನ್ಯೂಗಿನಿ ಪ್ರಧಾನಿ ಜೇಮ್ಸ್ ಮರಾಪೆ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದರು. ಮೋದಿ ಆಗಮನವನ್ನು ಗುರುತಿಸಲು ಅಲ್ಲಿ ಭಾರತದ ರಾಷ್ಟ್ರಗೀತೆಯನ್ನು ನುಡಿಸಲಾಯಿತು ಮತ್ತು ಇಬ್ಬರೂ ಪ್ರಧಾನ ಮಂತ್ರಿಗಳು ಎದ್ದು ನಿಂತು ಗೌರವ ಸಲ್ಲಿಸಿದರು. ಪ್ರಧಾನಿ ಮೋದಿ ಆಗಮಿಸಿದ ಸಂದರ್ಭದಲ್ಲಿ ಗೌರವ ರಕ್ಷೆಯನ್ನೂ ನೀಡಲಾಯಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


