ಬೆಂಗಳೂರು: ಕರ್ನಾಟಕ ರತ್ನ ಡಾ. ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷ ಕಳೆದಿದೆ. ಆದರೂ, ಇಂದಿಗೂ ನಮ್ಮ ನಡುವೆ ಅವರು ಇಲ್ಲ ಎಂಬುದನ್ನು ಅರಗಿಸಿಕೊಳ್ಳಲು ಇಂದಿಗೂ ಸಾಧ್ಯವಾಗುತ್ತಿಲ್ಲ. ತಮ್ಮ ಸರಳತೆ ಮತ್ತು ಮಾನವೀಯ ಗುಣಗಳಿಂದಲೇ ಕೋಟ್ಯಾಂತರ ಅಭಿಮಾನಿಗಳ ಮನದಲ್ಲಿ ಅಪ್ಪು ಮನೆ ಮಾಡಿದ್ದಾರೆ.
ಜೊತೆಗಿರದ ಜೀವ ಎಂದಿಗೂ ಜೀವಂತ ಎನ್ನುವಂತೆ ಪ್ರತಿ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಅಭಿಮಾನಿಗಳು ರಾಜನನ್ನು ನೆನೆಯುತ್ತಿದ್ದಾರೆ.
ಇಂದು ಕಂಠೀರವ ಸ್ಟುಡಿಯೋ ಬಳಿಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ್ರ ನೇತೃತ್ವದಲ್ಲಿ ಬಂದೋಬಸ್ತ್ ನೀಡಲಾಗಿದ್ದು. ನಿನ್ನೆ ರಾತ್ರಿಯಿಂದಲು ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಕಂಠೀರವ ಸ್ಟುಡಿಯೋ ಮುಂಭಾಗದಿಂದಲು ಸಹ ಪೊಲೀಸರು ಸರ್ಪಗಾವಲಿನಲ್ಲಿದ್ದು, ಬ್ಯಾರಿಕೇಡ್ಗಳನ್ನು ಅಳವಡಿಸಿರುವ ಮುಖಾಂತರವಾಗಿ ಜನರು ಬರುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಇಂದು ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಲಿದ್ದು, ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮವನ್ನು ಪೊಲೀಸರು ವಹಿಸಿದ್ದಾರೆ.
ಇನ್ನು ಪುನೀತ್ ರನ್ನು ನೋಡಲು ಬರುವ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ. ನಿನ್ನೆ ರಾತ್ರಿಯಿಂದಲು ಹಲವು ಕಾರ್ಯಕ್ರಮಗಳು ನಡೆಯುತ್ತಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


