nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯಕ್ಕೆ ಜೋಶಿ, ಕುಮಾರಸ್ವಾಮಿ ಕೊಡುಗೆ ಏನು?: ಬಹಿರಂಗ ಚರ್ಚೆಗೆ ಪ್ರದೀಪ್ ಈಶ್ವರ್ ಸವಾಲು

    June 19, 2025

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಮೆಟ್ರೋ ನಿಲ್ದಾಣದ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ: BMRCL ಸ್ಪಷ್ಟನೆ

    June 19, 2025
    Facebook Twitter Instagram
    ಟ್ರೆಂಡಿಂಗ್
    • ರಾಜ್ಯಕ್ಕೆ ಜೋಶಿ, ಕುಮಾರಸ್ವಾಮಿ ಕೊಡುಗೆ ಏನು?: ಬಹಿರಂಗ ಚರ್ಚೆಗೆ ಪ್ರದೀಪ್ ಈಶ್ವರ್ ಸವಾಲು
    • `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ
    • ಮೆಟ್ರೋ ನಿಲ್ದಾಣದ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ: BMRCL ಸ್ಪಷ್ಟನೆ
    • ಶೌಚಗುಂಡಿ ಗುಂಡಿಯಲ್ಲಿ ಪತ್ತೆಯಾಯ್ತು ಮಾನವನ ಅಸ್ಥಿಪಂಜರ!
    • ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ಹಣ ವಂಚನೆ ಆರೋಪ
    • ಹಿಟ್ಲರ್ ರಾಜಕಾರಣ ಮಾಡಬೇಡಿ, ನಿಮ್ಮ ದರ್ಪಕ್ಕೆ, ಧಮ್ಕಿಗೆ ಯಾರು ಹೆದರುವುದಿಲ್ಲ: ಸಚಿವ ಕೆ.ಎನ್.ರಾಜಣ್ಣ ವಿರುದ್ಧ  ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
    • ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ
    • “ಸಮಯೋಚಿತ ಕುಡಿಯುವ ನೀರು ಉಳಿಸಬಲ್ಲದು ಹಲವು ಮೂಕ ಪ್ರಾಣಿಗಳ ಜೀವ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ಜಿ.ಪರಮೇಶ್ವರ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್!
    ತಾಲೂಕು ಸುದ್ದಿ December 25, 2022

    ಡಾ.ಜಿ.ಪರಮೇಶ್ವರ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್!

    By adminDecember 25, 2022No Comments2 Mins Read
    sudhakar

    ಕೊರಟಗೆರೆ : ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ 1993ರಲ್ಲಿ ನನಗೆ ವೈದ್ಯಕೀಯ ಸೀಟ್ ನೀಡಿ ಶಿಕ್ಷಣಕ್ಕೆ ಸಹಾಯಹಸ್ತ ನೀಡಿದ್ರು. 2013 ರಲ್ಲಿ ನಾನು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕನಾಗಲು ಪ್ರಮುಖ ಕಾರಣವೇ ಡಾ.ಜಿ.ಪರಮೇಶ್ವರ. ಕರ್ನಾಟಕದ ಮುತ್ಸದ್ದಿ ನಾಯಕರ ರಾಜಕೀಯ ಜೀವನವೇ ನನ್ನ ಕೆಲಸಕ್ಕೆ ಪ್ರಮುಖ ಆದರ್ಶ.2023ಕ್ಕೆ ಕೊರಟಗೆರೆ ಕ್ಷೇತ್ರದ ಆರೋಗ್ಯ ವಿಭಾಗಕ್ಕೆ ವಿಶೇಷ ಅನುದಾನ ನೀಡುತ್ತೇನೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದರು.

    ಕೊರಟಗೆರೆ ತಾಲೂಕಿನ ದೊಡ್ಡಸಾಗ್ಗೆರೆ, ತೋವಿನಕೆರೆ, ಬುಕ್ಕಾಪಟ್ಟಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಏರ್ಪಡಿಸಲಾಗಿದ್ದ 5 ಕೋಟಿ ವೆಚ್ಚದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನೂತನ ಕಟ್ಟಡದ ಉದ್ಘಾಟನೆ ಹಾಗೂ 12 ಕೋಟಿ 50ಲಕ್ಷ ವೆಚ್ಚದ ತೋವಿನಕೆರೆ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಶಂಕುಸ್ಥಾಪನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.


    Provided by

    ಕೊರಟಗೆರೆ ಕ್ಷೇತ್ರದಲ್ಲಿ ಡಾ.ಜಿ.ಪರಮೇಶ್ವರ್ ಋಣ ತಿರಿಸುವ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಎಲ್ಲರನ್ನ ಪ್ರೀತಿಸುವ ಜನನಾಯಕ ಅಂದ್ರೇ ಪರಮೇಶ್ವರ್ ಸಾಹೇಬ್ರು. 2013ರ ಡಾ.ಜಿ.ಪರಮೇಶ್ವರ ಸೋಲು ದುರಾದುಷ್ಟಕರ. ಅದಕ್ಕಾಗಿ ಅವರಿಗೆ ಉನ್ನತ ಹುದ್ದೆಯು ಕೈತಪ್ಪಿತು. ನಾನು ಇವರ ಪರವಾಗಿ ಪ್ರಚಾರ ಮಾಡಿದ್ದೇನೆ. ಆ ವಿಚಾರಕ್ಕೆ ನನಗೂ ತುಂಬಾ ನೋವಿದೆ. ನನ್ನ ಬದುಕಿನಲ್ಲಿ ವಿಶೇಷ ಪಾತ್ರ ವಹಿಸಿದ ನಾಯಕ ಡಾ.ಜಿ.ಪರಮೇಶ್ವರಿಗೆ ಮುಂದಿನ ದಿನಗಳಲ್ಲಿ ಶುಭವಾಗಲಿ ಎಂದು ತಿಳಿಸಿದರು.

    ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್ ಮಾತನಾಡಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮತ್ತು ನನ್ನ ನಡುವೆ ತಂದೆ-ಮಗನ ಸಂಬಂಧವಿದೆ. ಅವರ ಅಭಿಮಾನಕ್ಕೆ ನಾನು ಅಭಾರಿ ಆಗಿದ್ದೇನೆ. ಆರೋಗ್ಯ ಸೇವೆಯಲ್ಲಿ ಸುಧಾಕರ್ ಜನರು ಮೆಚ್ಚಿಸುವಂತಹ ಕೆಲಸ ಮಾಡಿದ್ದಾರೆ. ಕೊರೊನಾ ನಿರ್ವಹಣೆಯ ಜವಾಬ್ದಾರಿಯಲ್ಲಿ ಯಶಸ್ಸು ಕಂಡಿದ್ದಾರೆ. ಕೊರಟಗೆರೆಗೆ ಸಾರ್ವಜನಿಕ ಆಸ್ಪತ್ರೆ, ವೈದ್ಯಕೀಯ ತಂಡ ಮತ್ತು ಸಿಬ್ಬಂದಿಗಳ ಕೋಟ್ರೇ ನೀವೇ ನನ್ನ ಕ್ಷೇತ್ರದ ನಿಜವಾದ ದೇವ್ರು ಎಂದು ತಿಳಿಸಿದರು.

    ದೊಡ್ಡಸಾಗ್ಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡದ ಉದ್ಘಾಟನೆ ನೇರವೇರಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮತ್ತು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್. ಆರೋಗ್ಯ ಕೇಂದ್ರದ ಆವರಣದಲ್ಲಿ ತಮ್ಮ ನಾಯಕರ ಪರವಾಗಿ ಘೋಷಣೆ ಕೂಗುತ್ತಿರುವ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು.

    ಕಾಂಗ್ರೆಸ್-ಬಿಜೆಪಿ ಬೆಂಬಲಿಗರ ಜೈಕಾರ;

    ದೊಡ್ಡಸಾಗ್ಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡದ ಉದ್ಘಾಟನೆಯ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಡಾ.ಜಿ.ಪರಮೇಶ್ವರ್ ಮತ್ತು ಜೈ ಹನುಮಾನ್ ಎಂದು ಜೈಕಾರ ಕೊಗಿದರೇ ಬಿಜೆಪಿ ಕಾರ್ಯಕರ್ತರು ನರೇಂದ್ರಮೋದಿ ಮತ್ತು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು. ಇದೇ ಸಂದರ್ಭದಲ್ಲಿ ಸಮಾರಂಭದ ಉದ್ಘಾಟನೆಗೆ ಆಗಮಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು.

    100 ಬೆಡ್ ಗಳ ಸರಕಾರಿ ಆಸ್ಪತ್ರೆಯ ಆಶ್ವಾಸನೆ:

    ಕೊರಟಗೆರೆ ಪಟ್ಟಣದಲ್ಲಿ 100 ಬೆಡ್ ಗಳ ಸರಕಾರಿ ಆಸ್ಪತ್ರೆ, ಕೋಳಾಲ ಆಸ್ಪತ್ರೆಯು ಮೇಲ್ದರ್ಜೆಗೆ ಏರಿಕೆ, ವೈದ್ಯಕೀಯ ತಂಡ ಮತ್ತು ಸಿಬ್ಬಂದಿಗಳ ನೇಮಕ ಸೇರಿದಂತೆ ಕೊರಟಗೆರೆ ಕ್ಷೇತ್ರಕ್ಕೆ ಅವಶ್ಯಕತೆ ಇರುವಂತಹ ಆರೋಗ್ಯ ಸೇವೆಯನ್ನು ತ್ವರಿತವಾಗಿ ನೀಡುತ್ತೇನೆ. ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಕೇಳಿದ ಎಲ್ಲಾ ಬೇಡಿಕೆಯನ್ನು ತ್ವರಿತವಾಗಿ ಪೂರೈಸುತ್ತೇನೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದರು.

    ನಂತರ ಡಾ ಜಿ ಪರಮೇಶ್ವರ್ ಮಾತನಾಡಿ ಭಾರತ ದೇಶದಲ್ಲಿ 700ಜನರಿಗೆ ಒಬ್ಬ ವೈದ್ಯರು ಇದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ಇನ್ನಷ್ಟು ವಿಶೇಷ ಬದಲಾವಣೆ ಅಗತ್ಯ. ಆರೋಗ್ಯ ಕ್ಷೇತ್ರದ ಬಗ್ಗೆ ಡಾ.ಕೆ.ಸುಧಾಕರ್ಗೆ ವಿಶೇಷ ಕಾಳಜಿ ಇದೆ. ಕೊರಟಗೆರೆ ಕ್ಷೇತ್ರದ ಆರೋಗ್ಯ ಕ್ಷೇತ್ರಕ್ಕೆ ಆರೋಗ್ಯ ಸಚಿವರು ವಿಶೇಷ ಅನುಧಾನ ನೀಡಬೇಕಿದೆ. ವೈದ್ಯಕೀಯ ತಂಡ ಮತ್ತು ಸಿಬ್ಬಂದಿಗಳ ಕೊರತೆ ಪೂರೈಸಿದರೆ ಕೊರಟಗೆರೆ ಕ್ಷೇತ್ರದ ಜನತೆ ನಿಮ್ಮನ್ನು ದೇವರಂತೆ ಪೂಜಿಸ್ತಾರೆ.

    ಕೊರಟಗೆರೆ ಸಿ.ವೀರಣ್ಣ ಮಾಜಿ ಸಚಿವ ಮಾತನಾಡಿ ಬುಕ್ಕಾಪಟ್ಟಣ ಬಡಜನರ ಬಹುದಿನದ ಆಸ್ಪತ್ರೆಯ ಬೇಡಿಕೆಯು ಈಗ ನನಸಾಗಿದೆ. ವೈದ್ಯಕೀಯ ಸೇವೆಗೆ ಮತ್ತೊಂದು ಹೇಸರೇ ಡಾ.ಜಿ.ಪರಮೇಶ್ವರ್. ಬಿಜೆಪಿ ಪಕ್ಷದ ಆರೋಗ್ಯ ಸಚಿವರೇ ಪರಮೇಶ್ವರ್ ನ್ನ ಮೆಚ್ಚಿ ಹಾಡಿ ಹೋಗಳಿರುವುದೇ ಪ್ರಮುಖ ಸಾಕ್ಷಿ ಅಲ್ಲವೇ. 2023ಕ್ಕೆ ಮತ್ತೇ ಕೊರಟಗೆರೆ ಕ್ಷೇತ್ರದಿಂದ ಪರಮೇಶ್ವರ್ಗೆ ಪೂರ್ಣ ಬೆಂಬಲ ಇರಲಿ ಎಂದು ಹಾರೈಸುವೆ ಎಂದು ತಿಳಿಸಿದರು.

    ವರದಿ: ಮಂಜುಸ್ವಾಮಿ.ಎಂ.ಎನ್. , ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ: ಪ್ರಲ್ಹಾದ್ ಜೋಶಿ ಆರೋಪ

    November 8, 2024

    ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರನ್ನು ಆಯ್ಕೆ ಮಾಡಿ: ಶಾಸಕ ಅನಿಲ್ ಚಿಕ್ಕಮಾದು

    April 16, 2024

    ಸರಗೂರು: ಶಿವಯೋಗಿ ಸಿದ್ಧರಾಮೇಶ್ವರರ 852 ನೇ  ಜಯಂತೋತ್ಸವ 

    February 7, 2024
    Our Picks

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025

    ಸೇತುವೆ ಕುಸಿದು 6 ಮಂದಿ ಪ್ರವಾಸಿಗರು ಸಾವು

    June 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯಕ್ಕೆ ಜೋಶಿ, ಕುಮಾರಸ್ವಾಮಿ ಕೊಡುಗೆ ಏನು?: ಬಹಿರಂಗ ಚರ್ಚೆಗೆ ಪ್ರದೀಪ್ ಈಶ್ವರ್ ಸವಾಲು

    June 19, 2025

    ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹೆಚ್.ಡಿ ಕುಮಾರಸ್ವಾಮಿಯವರಿಂದ ರಾಜ್ಯಕ್ಕೆ ಕೊಡುಗೆ ಏನು ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್…

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಮೆಟ್ರೋ ನಿಲ್ದಾಣದ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ: BMRCL ಸ್ಪಷ್ಟನೆ

    June 19, 2025

    ಶೌಚಗುಂಡಿ ಗುಂಡಿಯಲ್ಲಿ ಪತ್ತೆಯಾಯ್ತು ಮಾನವನ ಅಸ್ಥಿಪಂಜರ!

    June 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.