ಕೊರಟಗೆರೆ: ಏಕಲವ್ಯ ವಸತಿ ಶಾಲೆಯಲ್ಲಿ ಇತ್ತೀಚೆಗೆ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಿತ್ತೂರುರಾಣಿ ಚೆನ್ನಮ್ಮ, ಮುರಾರ್ಜಿ ದೇಸಾಯಿ ಮತ್ತು ಏಕಲವ್ಯ ವಸತಿ ಶಾಲೆಗಳಿಗೆ ದಿಢೀರ್ ಭೇಟಿ ನೀಡಿದರು.
ಇದೇ ವೇಳೆ ವಸತಿ ಶಾಲೆಯ ಮೂಲ ಸೌಲಭ್ಯದ ದುಸ್ಥಿತಿ ಕಂಡು ಕೆಂಡಮಂಡಲವಾದ ಸಚಿವರು ಶಾಲೆಯ ಪ್ರಾಂಶುಪಾಲ ಮತ್ತು ವಾರ್ಡನ್ ಗಳನ್ನು ತರಾಟೆಗೆತ್ತಿಕೊಂಡರು.
ನಾನೇ ಜಾಗ ಗುರುತಿಸಿ ಕಟ್ಟಿಸಿದ ಏಕಲವ್ಯ ವಸತಿ ಶಾಲೆಯಲ್ಲಿ ಇಂತಹ ದುಸ್ಥಿತಿಯೇ ಎಂದು ಬೇಸರ ವ್ಯಕ್ತಪಡಿಸಿದ ಅವರು, ಗ್ರಾಮೀಣ ಭಾಗದ ಬಡ ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾದ್ರೇ ಸಹಿಸೋದಿಲ್ಲ ಎಂದು ಎಚ್ಚರಿಕೆ ನೀಡಿದರು.
ಅನುದಾನದ ಬಗ್ಗೆ ಎರಡು ವರ್ಷದಿಂದ ನನ್ನ ಗಮನಕ್ಕೆ ಏಕೆ ತಂದಿಲ್ಲ ಎಂದು ಗೃಹ ಸಚಿವರು ಪ್ರಶ್ನಿಸಿದರು.
ವಿದ್ಯಾರ್ಥಿಗಳಿಗೆ ಅನಾರೋಗ್ಯ ಆದ್ರೇ ತಕ್ಷಣ ಅವರ ಪೋಷಕರ ಗಮನಕ್ಕೆ ತರುವಂತೆ ಸೂಚಿಸಿದ ಅವರು, ಮಕ್ಕಳ ಆರೋಗ್ಯದ ಬಗ್ಗೆ ದಾಖಲೆ ಮತ್ತು ವಿಶೇಷ ಕಾಳಜಿ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಲೆಯಲ್ಲಿ ಊಟ ಸವಿದು ಮತ್ತು ಮಕ್ಕಳ ಜೊತೆ ಪಾಠದ ಬೋದನೆ ಮಾಡಿದ ಪರಮೇಶ್ವರ್ ಅವರು, ಮೃತ ವಿದ್ಯಾರ್ಥಿ ಅಭಿಷೇಕ್ ಕುಟುಂಬಕ್ಕೆ 2 ಲಕ್ಷ ಧನ ಸಹಾಯ ನೀಡಿದರಲ್ಲದೇ, ವಿದ್ಯಾರ್ಥಿಯ ಕುಟುಂಬಕ್ಕೆ ಸರಕಾರಿ ನೌಕರಿ ಕೊಡಿಸುವ ಭರವಸೆ ನೀಡಿದರು.
ವರದಿ: ಮಂಜುಸ್ವಾಮಿ ಎಂ.ಎನ್.ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296