ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಭಂದಿಸಿದಂತೆ ನಗರದಲ್ಲಿ ಸಿಐಡಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಪರೀಕ್ಷೆ ಬರೆದಿದ್ದ ಎಂಟು ಅಭ್ಯರ್ಥಿಗಳನ್ನ ಬಂಧಿಸಿದ್ದಾರೆ.
ಬಂಧಿತರು ಕಲಬುರಗಿ ಜಿಲ್ಲೆಯ ಅಫಜಲಪುರ, ಜೇವರ್ಗಿ ತಾಲೂಕಿನ ನಿವಾಸಿಗಳು ಎಂದು ಹೇಳಲಾಗಿದೆ. ಇವರು ಬ್ಲೂಟೂತ್ ಎಲೆಕ್ಟ್ರಾನಿಕ್ ಡಿವೈಸ್ ಬಳಸಿ ಅಕ್ರಮವಾಗಿ ಪಿಎಸ್ಐ ಪರೀಕ್ಷೆ ಬರೆದಿದ್ದರು. ಎಂಟು ಜನ ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಆಯ್ಕೆಯಾಗಿದ್ದರು. ಎಂಟು ಅಭ್ಯರ್ಥಿಗಳ ಹೆಸರು ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿತ್ತು. ಇವರು ನಗರದ ಎಸ್.ಬಿ.ಆರ್. ಮತ್ತು ಸರ್ಕಾರಿ ಪದವಿ ಕಾಲೇಜಿನಲ್ಲಿ ಪರೀಕ್ಷೆ ಬರೆದಿದ್ದರು.
1) ರವಿರಾಜ್ ಅಖಂಡೆ
2) ಪೀರಪ್ಪ ಹಾಸ್ಟೆಲ್‌ನಲ್ಲಿ ಕುಕ್ಕರ್
3) ಶ್ರೀಶೈಲ್
4) ಭಗವಂತರಾಯ್
5) ಸಿದ್ದುಗೌಡ ಪಾಟೀಲ್ ಎಫ್‌ಡಿಎ
6) ಸೋಮನಾಥ್
7) ಕಲ್ಲಪ್ಪ ಅಲ್ಲಾಪುರ ಕಾನ್ಸ್ಟೆಬಲ್
8) ವಿಜಯಕುಮಾರ್
ಈ ಬಂಧಿತ ಅಭ್ಯರ್ಥಿಗಳು ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಕ್ಯಾಂಡಿಡೆಟ್‌ಗಳು ಎಂದು ಹೇಳಲಾಗಿದೆ. ಇವರು ತಲಾ 40 ಲಕ್ಷಕ್ಕೂ ಅಧಿಕ ಹಣವನ್ನ ಕಿಂಗ್ ಪಿನ್ ಆರ್.ಡಿ. ಪಾಟೀಲ್ ಗೆ ನೀಡಿದ್ದರು ಎಂದು ತಿಳಿದು ಬಂದಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz