ಮಂಗಳೂರು: ಸುರತ್ಕಲ್ ನ ಮಾರುಕಟ್ಟೆಯಲ್ಲಿ ಗುರುವಾರ ರಾತ್ರಿ ಕೊಲೆಯಾದ ಮಂಗಳಪೇಟೆಯ ನಿವಾಸಿ ಫಾಝಿಲ್ ನ ಅಂತ್ಯಸಂಸ್ಕಾರ ಶುಕ್ರವಾರ ಬೆಳಿಗ್ಗೆ ಮಂಗಳಪೇಟೆ ಜುಮ್ಮಾ ಮಸೀದಿಯಲ್ಲಿ ನಡೆದಿದೆ. ಫಾಝಿಲ್ ಅಂತ್ಯಸಂಸ್ಕಾರಕ್ಕೆಸಾವಿರಾರು ಮಂದಿ ಭಾಗವಹಿಸಿದ್ದರು.
ಪೊಲೀಸ್ ಬಿಗಿ ಭದ್ರತೆಯಲ್ಲಿ ಧಾರ್ಮಿಕ ಕಾರ್ಯಗಳು ನೆರವೇರಿತು. ಪೊಲೀಸ್ ಆಯುಕ್ತ ಎನ್ ಶಶಿಕುಮಾರ್, ಹಾಸನದ ಎಸ್ ಪಿ ಹರಿರಾಂ ಶಂಕರ್ ಭದ್ರತೆಯ ಉಸ್ತುವಾರಿ ವಹಿಸಿದ್ದು,ಯಾವುದೇ ಅಹಿತಕರ ಘಟನೆ ಇಲ್ಲದೆ ಶಾಂತಿಯುತವಾಗಿ ಫಾಝಿಲ್ ದಫನ ಕಾರ್ಯ ನೆರವೇರಿತು.
ಫಾಝಿಲ್ ಮನೆಗೆ ಶಾಸಕ ಯು.ಟಿ. ಖಾದರ್, ಮಾಜಿ ಶಾಸಕ ಮೊಯಿದ್ದೀನ್ ಬಾವ, ಐವನ್ ಡಿಸೋಜಾ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ಇರುವುದರಿಂದ ಸುರತ್ಕಲ್ ಪಣಂಬೂರು, ಮೂಲ್ಕಿ ಪ್ರದೇಶದಲ್ಲಿ ಸೆಕ್ಷನ್ ಜಾರಿಯಾಗಿದ್ದು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಅಂಗಡಿ ಮುಂಗ್ಗಟ್ಟುಗಳನ್ನು ಮುಚ್ಚಲಾಗಿದೆ. ಶಾಸಕ ಯು.ಟಿ. ಖಾದರ್ ಮಾತನಾಡಿ, ಜನತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದರು.
ಅಲ್ಲದೆ ಪರಿಹಾರ ವಿತರಣೆಯಲ್ಲಿ ಸರಕಾರ ಯಾವುದೇ ರೀತಿಯಲ್ಲಿ ತಾರತಮ್ಯ ತೋರಬಾರದು ಎಂದು ಒತ್ತಾಯಿಸಿದರು.ಫಾಝಿಲ್ ಕೊಲೆ ಪ್ರಕರಣಕ್ಕೆಸಂಬಂಧಪಟ್ಟಂತೆ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


