ಬೀದರ್: ಜಿಲ್ಲೆಯ ಭಾಲ್ಕಿ ಉಪವಿಭಾಗದ ವ್ಯಾಪ್ತಿಯಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತ ಮಕ್ಕಳು ವಾಹನ ಚಲಾಯಿಸುವುದು ಕಂಡುಬಂದರೆ, ಅವರ ಪೋಷಕರಿಗೆ ₹25,000 ದಂಡ ವಿಧಿಸುವುದರ ಜೊತೆಗೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭಾಲ್ಕಿ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಎಚ್ಚರಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಚಾಲನಾ ಪರವಾನಗಿ (DL) ಹಾಗೂ ಸೂಕ್ತ ದಾಖಲೆಗಳಿಲ್ಲದೆ, ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ಯುವಕ-ಯುವತಿಯರು ಅಡ್ಡಾದಿಡ್ಡಿ ವಾಹನ ಚಲಾಯಿಸುತ್ತಿರುವುದರಿಂದ ರಸ್ತೆ ಅಪಘಾತಗಳು ಹೆಚ್ಚಾಗಿ ಅಮೂಲ್ಯ ಜೀವಗಳು ಬಲಿಯಾಗುತ್ತಿವೆ. ಮಕ್ಕಳಿಗೆ ವಾಹನ ನೀಡುವ ಮುನ್ನ ಪೋಷಕರು ಸಂಚಾರ ನಿಯಮಗಳ ಅರಿವು ಹೊಂದಿರಬೇಕು ಹಾಗೂ ಅವರ ವಯಸ್ಸನ್ನು ಗಮನದಲ್ಲಿಟ್ಟುಕೊಂಡು ವಾಹನ ನೀಡಬೇಕು ಎಂದು ಸೂಚಿಸಿದ್ದಾರೆ.
ರಸ್ತೆಯಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ, ಸೈಲೆನ್ಸರ್ ಇಲ್ಲದೆ ಕರ್ಕಶ ಶಬ್ದ ಮಾಡುವುದು, ಅತಿವೇಗ ಚಾಲನೆ, ರಾಶ್ ರೈಡಿಂಗ್ ಹಾಗೂ ಟ್ರಿಪಲ್ ರೈಡಿಂಗ್ ಮಾಡುವವರ ವಿರುದ್ಧ ನಿಯಮಾನುಸಾರ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಾರ್ವಜನಿಕರು ರಸ್ತೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ತಮ್ಮ ಮತ್ತು ಇತರರ ಜೀವದ ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ಡಿವೈಎಸ್ಪಿ ಮನವಿ ಮಾಡಿದ್ದಾರೆ.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
