ತಿಪಟೂರು: ಪರೀಕ್ಷಾ ಶುಲ್ಕ ಹೆಚ್ಚಳ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಎನ್ ಎಸ್ ಯು ಐ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ವಿದ್ಯಾರ್ಥಿಗಳು ಪೈ ಹೋಟೆಲ್ ವೃತ್ತದಲ್ಲಿ ಸಮಾವೇಶಗೊಂಡು, ಪರೀಕ್ಷಾ ಶುಲ್ಕ ಹೆಚ್ಚಳ ಆದೇಶದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದಿನ ಸರ್ಕಾರಗಳು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಸ್ಕಾಲರ್ ಶಿಪ್ ಗಳನ್ನು ನೀಡುತ್ತಿದ್ದವು. ಬಡ ಮಕ್ಕಳು ಓದಬೇಕು ಎಂಬ ಉದ್ದೇಶದಿಂದ ಪ್ರೋತ್ಸಾಹ ನೀಡುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಪರೀಕ್ಷಾ ಶುಲ್ಕವನ್ನು ದಿಢೀರ್ 1 ಸಾವಿರ ಹೆಚ್ಚಳ ಮಾಡಲಾಗಿದೆ. ಇದನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಎಂದು ಮುಖಂಡರು ಎಚ್ಚರಿಕೆ ನೀಡಿದರು.
ಪ್ರತಿಭಟನಾ ರ್ಯಾಲಿಯಲ್ಲಿ ಎನ್ ಎಸ್ ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಮಂತ್ ನಗರಸಭಾ ಮಾಜಿ ಅಧ್ಯಕ್ಷ ಪ್ರಕಾಶ್ ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy