ಭಾರತ ಸರ್ಕಾರ, ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಶಿವಮೊಗ್ಗ, ಸಹ್ಯಾದ್ರಿ ವಿಜ್ಞಾನ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ, ಶಿವಮೊಗ್ಗ ಹಾಗೂ ಜಾಗೃತಿ ಯುವಕ ಸಂಘ, ಶಿವಮೊಗ್ಗ ಇವರು ಸಂಯುಕ್ತಾಶ್ರಯದಲ್ಲಿ ದಿನಾಂಕ 02.06.2023 ರಂದು ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪಾಥ್‌ವೇಸ್ ಸಭಾಂಗಣದಲ್ಲಿ “ಮಳೆನೀರು ಸಂರಕ್ಷಣೆ ಮತ್ತು ಜಿಲ್ಲಾ ಮಟ್ಟದ ರಸಪ್ರಶ್ನೆ ಮತ್ತು ಚಿತ್ರಕಲಾ ಸ್ಪರ್ಧಾ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಚನ್ನಬಸಪ್ಪರವರು ನೆರವೇರಿಸಿ ಮಾತನಾಡಿ, ಈಗಿನ ಯುವಕ, ಯುವತಿಯರು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿಯನ್ನು ತೋರಿಸಬೇಕು ಎಂದ ಅವರು ನೀರಿನ ಮಹತ್ವದ ಬಗ್ಗೆ, ಮಳೆ ನೀರಿನ ಕೊಯ್ತುನಿಂದ ಆಗುವ ಪ್ರಯೋಜನೆ, ಪರಿಸರ ಸಂರಕ್ಷಣೆ ಕುರಿತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಚಾರ್ಯರಾದ ಪ್ರೊ.ರಾಜೇಶ್ವರಿ.ಎನ್.ಮಾತನಾತಿ ಮಳೆ ನೀರನ್ನು ಹೇಗೆ ಸಂರಕ್ಷಣೆ ಮಾಡಬೇಕೆಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದಶಿವಮೊಗ್ಗ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಮಲ್ಲಪ್ಪ, ಕೆ. ತೊದಲಬಾಗಿಯವರು ಜಾತಿ, ಧರ್ಮ, ಎಲ್ಲವುಗಳಿಗಿಂತ ಅತಿ ಮುಖ್ಯಗಿಡ, ಮರಗಳು. ಇವುಗಳ ಉಳಿವಿಗೆ ನಾವು ಕೈಜೋಡಿಸಬೇಕು.
ಮರುಭೂಮಿಯೂ ಸಹ ಮಳೆ ನೀರು ಕೊಯ್ಲು ಪದ್ಧತಿಯನ್ನು ಹೇಗೆ ಅಳವಡಿಸಿಕೊಳ್ಳಲಾಗಿದೆ ಎಂಬ ಬಗ್ಗೆ ಮಾಹಿತಿ ನೀಡಿದರು.
ಕುವೆಂಪು ವಿವಿ.ಎನ್.ಎಸ್.ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ನಾಗರಾಜ ಪರಿಸರ ರವರು ಮಳೆನೀರು ಸಂಕ್ಷಣೆ ಕುರಿತು ಮಾತನಾಡಿ, ನಾವು ಪ್ರಕೃತಿಯನ್ನು ಕಾಪಾಡಿದರೆ ನಮಗೆ ಪ್ರಕೃತಿ ಉಡುಗೊರೆಯಾಗಿ ದೊರೆಯುತ್ತದೆ ಎಂದರು.
ಈ ವೇಳೆ ಎಲ್ಲರೂ ಜಲಪ್ರತಿಜ್ಞೆಯನ್ನು ತೆಗೆದು ಕೊಳ್ಳಲಾಯಿತು.ಹಾಗೂ ರಸಪ್ರಶ್ನೆ/ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಅಭ್ಯರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಯಿತು.
ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್, ಸ.ವಿ. ಕಾಲೇಜಿನ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಡಾ.ನಾಗಾರ್ಜುನ್, ಕಾಲೇಜಿನ ಸಿಬ್ಬಂದಿ ವರ್ಗದವರು,ಜಿಲ್ಲೆಯ ವಿವಿಧ ಕಾಲೇಜಿನಿಂದ ಆಗಮಿಸಿದ್ದ ಸ್ಪರ್ಧಿಗಳು, ಕಾಲೇಜು ವಿದ್ಯಾರ್ಥಿಗಳು, ನೆಹರು ಯುವ ಕೇಂದ್ರದ ಕಾರ್ಯಕರ್ತರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


