ತುಮಕೂರು: ವಿಧಾನ ಪರಿಷತ್ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಬಲ್ಲದು. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಮಾಜಿ ಡಿಸಿಎಂ, ಕಾಂಗ್ರೆಸ್ ನ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಹೇಳಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ತುಮಕೂರು ಜಿಲ್ಲೆ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆರ್.ರಾಜೇಂದ್ರ ಅವರು ನಾಮಪತ್ರ ಸಲ್ಲಿಸಿದ ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಪರಮೇಶ್ವರ್ ಮಾತನಾಡುತ್ತಿದ್ದರು.
ಈ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಬಹುದು. ಇಂದು ನಮ್ಮ ಅಭ್ಯರ್ಥಿಯ ಗೆಲುವು ಕಾಂಗ್ರೆಸ್ ನ ಗೆಲುವಾಗಬೇಕು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಗೆಲುವಾಗಬೇಕು ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.
ನಾಮಪತ್ರ ಸಲ್ಲಿಸಿದ ವೇಳೆ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಮಾಜಿ ಸಚಿವರಾದ ವೆಂಕಟರವಣಪ್ಪ, ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಧುಗಿರಿಯ ಮಾಜಿ ಶಾಸಕ ಕೆ.ಎನ್.ರಾಜೇಂದ್ರ, ಮಾಜಿ ಶಾಸಕರುಗಳಾದ ಷಡಕ್ಷರಿ,ಷಫೀ ಅಹಮ್ಮದ್ ರಫೀಕ್ ಅಹಮ್ಮದ್ ಮತ್ತಿತರರು ಹಾಜರಿದ್ದರು.
ವಿಡಿಯೋ: ಜಿ.ಪರಮೇಶ್ವರ್ ಅವರು ಮಾತನಾಡುತ್ತಿರುವುದು
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700