ಕೊಲ್ಕೋತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಬಹುದಿತ್ತು. ಆದರೆ, ಕೋವಿಡ್ ಎರಡನೇ ಅಲೆ ಬಂದಿದ್ದರಿಂದ ಸಮಸ್ಯೆಯಾಯಿತು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.
ಆದರೆ, ಕೋವಿಡ್ ಎರಡನೇ ಅಲೆಯ ಕಾರಣ ಬಿಜೆಪಿಗೆ ಪ್ರಚಾರ ನಡೆಸಲು ತೊಂದರೆಯಾಯಿತು ಎಂದು ಹೇಳಿಕೊಂಡಿದ್ದಾರೆ. ದೇಶದಲ್ಲಿ ಎರಡನೇ ಅಲೆ ಕಾರಣ ಲಾಕ್ಡೌನ್ ಹಾಗೂ ಕೋವಿಡ್ ಮಾರ್ಗಸೂಚಿ ಹೇರಿಕೆ ಮಾಡಲಾಗಿತ್ತು. ಹೀಗಾಗಿ, ನಮ್ಮ ಚುನಾವಣಾ ಪ್ರಚಾರದ ಕಾರ್ಯ ಸರಿಯಾಗಿ ನಡೆಸಲು ಆಗಲಿಲ್ಲ ಎಂದು ನಡ್ಡಾ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಒಟ್ಟು ಎಂಟು ಹಂತಗಳಲ್ಲಿ ಚುನಾವಣೆ ನಡೆದಿತ್ತು. ನಾಲ್ಕನೇ ಹಂತದ ಕ್ಷೇತ್ರಗಳಿಗೆ ಮತದಾನ ನಡೆಯುವ ಹೊತ್ತಿಗೆ ಕೋವಿಡ್ ಅಲೆ ಹೆಚ್ಚಾಗಿದ್ದರಿಂದ ಕೆಲವೊಂದು ಪ್ರದೇಶಗಳಲ್ಲಿ ಸರಿಯಾಗಿ ಪ್ರಚಾರ ನಡೆಸಲು ಸಾಧ್ಯವಾಗಲಿಲ್ಲ ಎಂದರು. ಪಶ್ಚಿಮ ಬಂಗಾಳದಲ್ಲಿ ನಮ್ಮ ಪ್ರಯತ್ನ ಯಾವುದೇ ಕಾರಣಕ್ಕೂ ನಿಲ್ಲಲ್ಲ ಎಂದಿರುವ ಅವರು, ಬರುವ ದಿನಗಳಲ್ಲಿ ಖಂಡಿತವಾಗಿ ತೃಣಮೂಲ ಕಾಂಗ್ರೆಸ್ ಸೋಲಿಸಿ, ನಮ್ಮ ಪಕ್ಷವನ್ನ ಅಧಿಕಾರಕ್ಕೆ ತರುತ್ತೇವೆ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB