ಬೆಂಗಳೂರು: ಮೆಟ್ರೋ ನಿಲ್ದಾಣದಲ್ಲಿ ಪಾನ್ ಉಗುಳಿದ ಪ್ರಯಾಣಿಕನೊಬ್ಬನಿಗೆ ಬಿಎಂಆರ್ಸಿಎಲ್ ದಂಡ ವಿಧಿಸಿದೆ.
ಮೇ 2 ರಂದು ಸಂಜೆ 6.30 ಕ್ಕೆ ದೊಡ್ಡಕಲ್ಲಸಂದ್ರ ಗ್ರೀನ್ ಲೈನ್ ಮೆಟ್ರೋ ನಿಲ್ದಾಣದ ಪ್ಲಾಟ್ ಫಾರ್ಮ್ 1 ರ ಲಿಫ್ಟ್ ಬಳಿ ಪ್ರಯಾಣಿಕ ಪಾನ್ ಮಸಾಲ ಜಗಿದು ಉಗುಳುತ್ತಿದ್ದ. ಈ ವೇಳೆ ಪ್ರಯಾಣಿಕನಿಗೆ ಮೆಟ್ರೋ ಅಧಿಕಾರಿಗಳು ದಂಡ ವಿಧಿಸಿದ್ದಾರೆ.
ಮೆಟ್ರೊ ಆವರಣದಲ್ಲಿ ಉಗುಳುವುದು ಮತ್ತು ಕಸದಂಚುಗಳನ್ನು ಎಸೆಯುವುದು ಪರಿಸರ ಹಾಳಾಗುವುದಲ್ಲದೆ, ಇತರ ಪುಯಾಣಿಕರ ಆರೋಗ್ಯಕ್ಕೂ ಅಪಾಯವನ್ನು ಉಂಟುಮಾಡುತ್ತದೆ. ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ಸ್ವಚ್ಛ, ಆರೋಗ್ಯಕರ ಮತ್ತು ಸುರಕ್ಷಿತ ಸಾರ್ವಜನಿಕ ಸಾರಿಗೆಯ ವ್ಯವಸ್ಥೆಗಾಗಿ ಕಟಿಬದ್ಧವಾಗಿದೆ.
ಸ್ವಚ್ಛತಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲ ಪ್ರಯಾಣಿಕರು ಸಹಕರಿಸಿ, ಇಂತಹ ಘಟನೆಗಳು ಸಂಭವಿಸಿದರೆ ತಕ್ಷಣವೇ ಮೆಟ್ರೊ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಬಿಎಂಆರ್ಸಿಎಲ್ ಭಾನುವಾರ ಪ್ರಕಟಣೆಯಲ್ಲಿ ಮನವಿ ಮಾಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————