ಬೆಂಗಳೂರಿನ ನೇರಳೆ ಮಾರ್ಗದ ಮೆಟ್ರೋ ಮಾರ್ಗದಲ್ಲಿ ವ್ಯತ್ಯಯ ಕಂಡು ಬಂದಿದೆ. ಇಂದು ಬೆಳಗ್ಗೆ 9:58 ಗಂಟೆ ಸುಮಾರಿಗೆ ಮೆಟ್ರೋ ಹತ್ತಿದ್ದ ಪ್ರಯಾಣಿಕರು ಇನ್ನೇನು ಇಳಿಯಬೇಕು ಎಂದು ಕಾದು ನಿಂತಿದ್ದು ಡೋರ್ ಓಪನ್ ಆಗದೆ ಬೋಗಿ ಒಳಗಡೆ ಲಾಕ್ ಆಗಿದ್ದರು.
ಮುಂಜಾನೆ 9:58ರಲ್ಲಿ ವ್ಯತ್ಯಯವುಂಟಾಗಿದ್ದ ನೇರಳೆ ಮಾರ್ಗದ ಮೆಟ್ರೋ ಸಂಚಾರ ಬೆಳಗ್ಗೆ 11:30 ರ ವೇಳೆಗೆ ಸಹಜ ಸ್ಥಿತಿಗೆ ಮರಳಿದೆ. ಬೆಳಗ್ಗೆ ಕೆಲಸಕ್ಕೆ ತರಳುವ ವೇಳೆ ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ಅಡಚಣೆ ಉಂಟಾದ ಕಾರಣ ಕಚೇರಿಗಳಿಗೆ ತಲುಪಲು ಜನಸಾಮಾನ್ಯರಿಗೆ ಸಮಸ್ಯೆ ಉಂಟಾಗಿತ್ತು. ಈಗ ಮೆಟ್ರೋ ಸೇವೆ ಎಂದಿನಂತೆ ಸಹಜ ಸ್ಥಿತಿಗೆ ಬಂದಿದೆ. ಆದರೂ ಜನರಲ್ಲಿ ಕೊಂಚ ಭಯ ಉಂಟಾಗಿದೆ. ಇವತ್ತು ಸಂಭವಿಸಿದ ಸಮಸ್ಯೆಯಿಂದಾಗಿ ಪ್ರಯಾಣಿಕರು ಒಂದು ಗಂಟೆಗಳ ಕಾಲ ಮೆಟ್ರೋ ರೈಲಿನ ಒಳಗಡೆಯೇ ಲಾಕ್ ಆಗುವಂತಾಗಿತ್ತು.
ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದ ಬೋಗಿಯ ಡೋರ್ ಗಳು ಓಪನ್ ಆಗದೆ ಲಾಕ್ ಆಗಿದ್ದವು. ಗಂಟೆಗಟ್ಟಲೆ ಕಾದರೂ ಡೋರ್ ಓಪನ್ ಆಗದೆ ಒಳಗಡೆ ಇದ್ದ ಪ್ರಯಾಣಿಕರು ಪರದಾಡುವಂತಾಗಿತ್ತು. ಮೆಟ್ರೋ ಪ್ರಯಾಣಿಕರಿಗೆ ಆದ ಅಡಚಣೆ ಬಗ್ಗೆ ಬಿಎಂಆರ್ಸಿಎಲ್ ವಿಷಾದ ವ್ಯಕ್ತಪಡಿಸಿದೆ.
ಇಂದು ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ಅಡಚಣೆಯಿಂದಾಗಿ ಬೆಳಗ್ಗೆ 9.58 ಕ್ಕೆ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಯಿತು ಮತ್ತು ನಂತರ ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ನಲ್ಲಿ ದೋಷಯುಕ್ತ ರೈಲನ್ನು ಪಾಕೆಟ್ ಟ್ರ್ಯಾಕ್ಗೆ ಕೊಂಡೋಯ್ಯಲಾಯಿತು. ಈಗ ರೈಲು ಸೇವೆ ಎಂದಿನಂತೆ ಆರಂಭಿಸಲಾಗಿದೆ. ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ.
— ನಮ್ಮ ಮೆಟ್ರೋ (@OfficialBMRCL) June 13, 2024
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA