ತುಮಕೂರು: ತುಮಕೂರಿನಿಂದ ಬೆಂಗಳೂರು ನಗರಕ್ಕೆ ಸಂಚರಿಸುವ ರೈಲಿಗೆ ರೈಲ್ವೆ ಪ್ರಯಾಣಿಕರ ವೇದಿಕೆ ವತಿಯಿಂದ ವಿಶೇಷವಾಗಿ ರೈಲಿನ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಯಿತು.
ಹತ್ತು ವರ್ಷಗಳ ಹಿಂದೆ ತುಮಕೂರಿನಿಂದ ಬೆಂಗಳೂರಿಗೆ ತೆರಳಲು ರೈಲನ್ನು ವ್ಯವಸ್ಥೆ ಮಾಡಲಾಗಿತ್ತು. ರೈಲಿಗೆ ವಿಶೇಷವಾಗಿ ಪ್ರಯಾಣಿಕರು ಪೂಜೆ ಸಲ್ಲಿಸುತ್ತಿದ್ದರು. ಅಂದಿನಿಂದ ಪ್ರತಿ ವರ್ಷ ರೈಲಿನ ಹುಟ್ಟುಹಬ್ಬವನ್ನೇ ಆಚರಣೆ ಮಾಡಿಕೊಂಡು ಪ್ರಯಾಣಿಕರು ಬರುತ್ತಿದ್ದಾರೆ. ಅದರಂತೆ ಇಂದು ಕೂಡ 10ನೇ ವರ್ಷದ ರೈಲಿನ ಹುಟ್ಟುಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ರೈಲಿಗೆ ಹಸಿರು ತಳಿರು ತೋರಣ ಹಾಗೂ ಹೂವನ್ನು ಕಟ್ಟಿ ಸಿಂಗರಿಸಲಾಗಿತ್ತು. ಅಲ್ಲದೆ ಪುರೋಹಿತರು ಬಂದು ರೈಲಿಗೆ ಆರತಿ ಬೆಳಗಿದರು. ಇದೆ ವೇಳೆ ಕೇಕ್ ಅನ್ನು ಕತ್ತರಿಸಿ ಸ್ಥಳದಲ್ಲಿದ್ದ ಪ್ರಯಾಣಿಕರಿಗೆ ಸಿಹಿಯನ್ನು ಹಂಚಲಾಯಿತು.
ನಿತ್ಯ ಸಾವಿರಾರು ಮಂದಿ ತುಮಕೂರಿನಿಂದ ಬೆಂಗಳೂರಿಗೆ ಕೆಲಸ ಅರಸಿ ತೆರಳುತ್ತಾರೆ. ಈ ರೈಲಿನ ಸಂಪರ್ಕ ವ್ಯವಸ್ಥೆಯಿಂದ ಸಾಕಷ್ಟು ಅನುಕೂಲವಾಗಿದೆ ಎಂಬ ಅಭಿಮಾನದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296