ಬೀದರ್: ಜಿಲ್ಲೆಯ ಹುಮನಾಬಾದ್ ತಾಲೂಕಿನ ಹುಡುಗಿ ಗ್ರಾಮದಲ್ಲಿ ಬಸ್ ನಿಲ್ದಾಣವಿಲ್ಲದೆ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.
ಗ್ರಾಮದಿಂದ ಮುಂಬೈ, ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 6.5 ಹಾದು ಹೋಗಿದೆ. ಸುತ್ತಮುತ್ತಲಿನ 10ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಗ್ರಾಮ ಇದಾಗಿದೆ.
ಗ್ರಾಮದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಬ್ಯಾಂಕ್ ಗಳ ವಿವಿಧ ಕೆಲಸ ಕಾರ್ಯಗಳಿಗಾಗಿ ನಿತ್ಯವೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಸರ್ಕಾರಿ, ಖಾಸಗಿ ಬಸ್ ಗಳು ಗ್ರಾಮದ ಮೂಲಕ ಸಂಚರಿಸುತ್ತವೆ. ಲಾರಿ, ಬೃಹತ್ ವಾಹನಗಳು ಸಹ ಇದೇ ಮಾರ್ಗದಲ್ಲಿ ಸಾಗುತ್ತವೆ.
ಬೆಳಗಿನ ಜಾವದಿಂದ ರಾತ್ರಿವರೆಗೆ ಬಸ್ ಗಳಿಗಾಗಿ ನೂರಾರು ಪ್ರಯಾಣಿಕರು ಕಾದು ಕುಳಿತಿರುತ್ತಾರೆ. ಬಸ್ ತಂಗುದಾಣವಿಲ್ಲ. ಹೀಗಾಗಿ ಬಿಸಿಲು, ಮಳೆಯಲ್ಲಿಯೇ ಗಂಟೆಗಟ್ಟಲೇ ಕಾದು ಹೈರಾಣಾಗುತ್ತಿದ್ದಾರೆ.
ಪ್ರಯಾಣಿಕರು ಬಸ್ ಗಾಗಿ ಬಿಸಿಲಿನಲ್ಲಿ ಅಥವಾ ಮರದ ಬುಡದಲ್ಲಿ ಕಾಯಬೇಕಾಗಿದೆ. ಮಳೆಗಾಲದಲ್ಲಿ ಸರಕಿನೊಂದಿಗೆ ಪ್ರಯಾಣಿಸುವವರು, ಮಕ್ಕಳನ್ನು ಕರೆದುಕೊಂಡು ಹೋಗುವವರು, ವೃದ್ಧರು ಹೆಚ್ಚು ಸಂಕಷ್ಟ ಅನುಭವಿಸುವಂತಾಗಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4