ಉತ್ತರಾಖಂಡ ಸರ್ಕಾರವು ಪರವಾನಗಿ ನಿಷೇಧಗೊಳಿಸಿರುವ ತನ್ನ 14 ಉತ್ಪನ್ನಗಳ ಮಾರಾಟವನ್ನು ನಿಲ್ಲಿಸಿರುವುದಾಗಿ ಯೋಗ ಗುರು ಬಾಬಾ ರಾಮ್ ದೇವ್ ಅವರ ಪತಂಜಲಿ ಸಂಸ್ಥೆ ಮಂಗಳವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.
ಪತಂಜಲಿಯ 14 ಉತ್ಪನ್ನಗಳ ದಕ್ಷತೆ ಬಗ್ಗೆ ಸುಳ್ಳು ಜಾಹೀರಾತು ನೀಡಿ ಮಾರಾಟ ಮಾಡುತ್ತಿದ್ದ ಕಾರಣ ಅವುಗಳ ಪರವಾನಗಿಯನ್ನು ಉತ್ತರಾಖಂಡ ಸರ್ಕಾರ ರದ್ದುಪಡಿಸಿತ್ತು.
ಈ ಉತ್ಪನ್ನಗಳ ಬಗ್ಗೆ ಜಾಹೀರಾತು ಪ್ರಸಾರವಾಗುತ್ತಿಲ್ಲ, ಮಾರಾಟ ಮಾಡುತ್ತಿಲ್ಲ ಎಂಬುದನ್ನು ಖಾತರಿ ಪಡಿಸಿಕೊಂಡು 2 ವಾರದ ಒಳಗೆ ಅಫಿಡವಿಟ್ ಸಲ್ಲಿಸುವಂತೆ ಪತಂಜಲಿ ಸಂಸ್ಥೆಗೆ ಸುಪ್ರೀಂ ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಪೀಠದ ಮುಂದೆ ಪತಂಜಲಿ ಸಂಸ್ಥೆ ಅಫಿಡವಿಟ್ ಸಲ್ಲಿಸಿದೆ.
ಈ ವೇಳೆ ಸಂಸ್ಥೆಯ 5,606 ಫ್ರಾಂಚೈಸಿಗಳಿಗೂ ನಿಷೇಧಿತ ಉತ್ಪನ್ನಗಳನ್ನು ಮಾರಾಟ ಮಾಡದಂತೆ ನಿರ್ದೇಶಿಸಿದೆ ಹಾಗೂ ಮಾಧ್ಯಮಗಳಿಗೂ ಈ ಉತ್ಪನ್ನಗಳಿಗೆ ಸಂಬಂಧಿಸಿದ ಜಾಹೀರಾತು ಪ್ರದರ್ಶಿಸದಂತೆ ತಿಳಿಸಿರುವುದಾಗಿ ಹೇಳಿದೆ ಎಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA