ಮಧುಗಿರಿ : ಗಂಡ ಹೆಂಡತಿ ನಡುವೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಗಂಡನೇ ಹೆಂಡತಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸೋಮವಾರ ಮಿಡಿಗೇಶಿ ಹೋಬಳಿಯ ಬೇಡತ್ತೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪುಷ್ಪಲತಾ (24) ಕೊಲೆಯಾದ ಮಹಿಳೆ. ಕೂಲಿಯ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಗಂಡ ಹೆಂಡತಿಯ ನಡುವೆ ಮಾತಿಗೆ ಮಾತು ಬೆಳೆದಿದ್ದು, ಜಗಳ ವಿಕೋಪಕ್ಕೆ ತಿರುಗಿದೆ.
ಈ ಸಂದರ್ಭದಲ್ಲಿ ಗಂಡ ರಾಮಾಂಜನೇಯ ತನ್ನ ಹೆಂಡತಿಯ ಮೇಲೆ ಮಚ್ಚಿನಿಂದ ಬೀಸಿದ್ದು, ಹೆಂಡತಿ ಮನೆಯಲ್ಲಿಯೇ ಮೃತಪಟ್ಟಿದ್ದು ಗಂಡ ರಾಮಾಂಜನೇಯ ತಲೆಮರೆಸಿಕೊಂಡಿದ್ದಾನೆ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy