ಪ್ರಿಯಕರನ ಜೊತೆ ಸೇರಿಕೊಂಡು ಗಂಡನನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ನೇಪಾಳ ಮೂಲದ ರಾಕೇಶ್ ತೋಮಂಗ ಕೊಲೆಯಾದ ದುರ್ದೈವಿ. ಪತ್ನಿ ದೇಬಿತಂಬಾಗ್ ಹಾಗೂ ಆಕೆಯ ಪ್ರಿಯಕರ ಬಾಬು ಅಲಿ ಬಂಧಿತ ಆರೋಪಿಗಳು.
ಪತ್ನಿ ದೇಬಿತಂಬಾಗ್ ಹಾಗೂ ಆಕೆಯ ಪ್ರಿಯಕರ ಬಾಬು ಅಲಿ ನಡುವೆ ಅನೈತಿಕ ಸಂಬಂಧ ಇತ್ತು. ಈ ವಿಚಾರ ತಿಳಿದ ರಾಕೇಶ್ ತೋಮಂಗ ಪ್ರಶ್ನೆ ಮಾಡಿದ್ದ. ಈ ವೇಳೆ ಪತ್ನಿ ಮತ್ತು ಪ್ರಿಯಕರ ಸೇರಿ ತೋಮಂಗನನ್ನು ನವೆಂಬರ್ 6ರಂದು ಕೊಲೆ ಮಾಡಿದ್ದರು.
ಸದ್ಯ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ (FIR) ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


