ಬುರ್ಹಾನ್‌ಪುರ: 40 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಮೂವರು ಪುತ್ರಿಯರನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ನೇಪಾನಗರದ ದವಾಲಿಖುರ್ದ್ ಗ್ರಾಮದಲ್ಲಿ ನಡೆದಿದೆ.
40 ವರ್ಷದ ಮನೋಜ್, ಅವರ ಪತ್ನಿ ಸಾಧನಾ ಮತ್ತು ಮೂವರು ಪುತ್ರಿಯರಾದ ಅಕ್ಷರ, ನೇಹಾ ಮತ್ತು ತನು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮನೋಜ್ ಮತ್ತು ಸಾಧನಾ ಅವರ ಶವಗಳು ಮಲಗುವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದರೆ, ಮೂವರು ಹುಡುಗಿಯರ ಶವಗಳು ಹೊರಗಿನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿವೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸ್ಥಳೀಯರ ಪ್ರಕಾರ, ಕಳೆದ ಕೆಲವು ದಿನಗಳಿಂದ ಮನೋಜ್ ಮತ್ತು ಅವರ ಕುಟುಂಬ ಸದಸ್ಯರು ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಬಗ್ಗೆ ಪೊಲೀಸರು ವಿವರವಾದ ತನಿಖೆ ಆರಂಭಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


