ಬೆಂಗಳೂರು: ಪತ್ನಿ, ಇಬ್ಬರು ಪುತ್ರಿಯರಿಗೆ ವಿಷವುಣಿಸಿ ಪತಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಗರದ ಕೋಣನಕುಂಟೆಯ ಠಾಣಾ ವ್ಯಾಪ್ತಿಯ ವಡ್ಡರಪಾಳ್ಯ ಮನೆಯೊಂದರಲ್ಲಿ ನಡೆದಿದೆ.
ಪತ್ನಿ ವಿಜಯಾ(28), ಪುತ್ರಿಯರಾದ ನಿಶಾ(7), ದೀಕ್ಷಾ(5) ಮೃತ ದುರ್ದೈವಿಗಳು. ಪತಿ ನಾಗೇಂದ್ರ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಊಟದಲ್ಲಿ ವಿಷವುಣಿಸಿ ಹತ್ಯೆ ಶಂಕೆ ವ್ಯಕ್ತವಾಗಿದೆ. ಇನ್ನು ಪತಿ ನಾಗೇಂದ್ರ ಕ್ಯಾನ್ಸರ್ನಿಂದ ಬಳತ್ತಿದ್ದು,ಬ್ಲೇಡ್ ನಿಂದ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗುತ್ತಿದೆ.
2014ರಲ್ಲಿ ದಂಪತಿ ಮದುವೆಯಾಗಿದ್ದರು. ನಾಗೇಂದ್ರನಿಗೆ ವಿಪರೀತ ಕುಡಿದ ಚಟ ಇತ್ತು. ಪತ್ನಿ ವಿಜಯ ಮೆಡಿಕಲ್ ನಲ್ಲಿ ಕೆಲಸ ಮಾಡುತ್ತಿದ್ದರು. ವಿಜಯ ಆರ್ಥಿಕವಾಗಿ ಕುಟುಂಬಕ್ಕೆ ಆಧಾರವಾಗಿದ್ದರು. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


