ಚಿತ್ರದುರ್ಗ: 17 ವರ್ಷದ ಬಾಲಕಿಯನ್ನು ಬಲವಂತವಾಗಿ ವಿವಾಹವಾಗಿದ್ದ ವ್ಯಕ್ತಿಯೊಬ್ಬ ಆಕೆಯ ಮೇಲೆ ಸ್ನೇಹಿತರ ಜೊತೆ ಸೇರಿ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಜೂನ್ 7 ರಂದು ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಅಂದು ನಗರದ ಹೊರವಲಯಕ್ಕೆ ಬಾಲಕಿಯನ್ನು ಕರೆದೊಯ್ದ ಪತಿ ತನ್ನ ಮೂವರು ಸ್ನೇಹಿತರ ಜೊತೆ ಸೇರಿ ಆಕೆಯ ಮೇಲೆ ಹಲ್ಲೆ ಮಾಡಿ ಬಳಿಕ ಎಲ್ಲರೂ ಅತ್ಯಾಚಾರವೆಸಗಿದ್ದಾರೆ.
ಬಾಲಕಿಯ ಶೀಲದ ಕುರಿತು ಶಂಕೆ ಹೊಂದಿದ್ದ ಪತಿ ಪದೇ ಪದೇ ಆಕೆಯ ಮೇಲೆ ಹಲ್ಲೆ ಮಾಡುತ್ತಿದ್ದ ಎನ್ನಲಾಗಿದೆ. ಜೂನ್ 7ರಂದು ಸ್ನೇಹಿತರ ಜೊತೆ ಸೇರಿ ಅತ್ಯಾಚಾರವೆಸಗಿ ಬಳಿಕ ಘಟನೆಯನ್ನು ಯಾರಿಗೂ ಹೇಳದಂತೆ ಜೀವ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಇದೀಗ ಬಾಲಕಿ ಮಹಿಳಾ ಠಾಣೆಗೆ ದೂರು ನೀಡಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


