ಬಳ್ಳಾರಿ: ಹೆಂಡತಿ ಶೀಲ ಶಂಕಿಸಿ ಆಕೆಯನ್ನ ಬರ್ಬರವಾಗಿ ಹತ್ಯೆಗೈದು ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಜಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರೇಖಾ (30) ಕೊಲೆಯಾದ ಮಹಿಳೆ. ಕುಮಾರಸ್ವಾಮಿ (35) ಆತ್ಮಹತ್ಯೆಗೆ ಶರಣಾದ ಪತಿ. 12 ವರ್ಷದ ಹಿಂದೆ ರೇಖಾಳನ್ನ ಮದುವೆಯಾಗಿದ್ದ ಕುಮಾರಸ್ವಾಮಿಗೆ 5 ಜನ ಮಕ್ಕಳಿದ್ದಾರೆ. ಹಾಗಿದ್ದರೂ ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡು ಕುಮಾರಸ್ವಾಮಿ, ಜಿಗೇನಹಳ್ಳಿ ಗ್ರಾಮದ ಜಮೀನಿಗೆ ಪತ್ನಿಯನ್ನು ಕರೆದುಕೊಂಡು ಹೋಗಿ ಕುಡುಗೋಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ.
ಬಳಿಕ ತಾನೂ ಕೂಡ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚೋರನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


