nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಲ್ಲಿ 2 ಕೊಲೆ: ಪತ್ನಿಯರನ್ನು ಕೊಂದ ಗಂಡಂದಿರು..!
    ರಾಜ್ಯ ಸುದ್ದಿ March 27, 2022

    ಬೆಂಗಳೂರಲ್ಲಿ 2 ಕೊಲೆ: ಪತ್ನಿಯರನ್ನು ಕೊಂದ ಗಂಡಂದಿರು..!

    By adminMarch 27, 2022No Comments3 Mins Read
    bangalore

    ಬೆಂಗಳೂರು:  ನಗರದಲ್ಲಿ ಇಬ್ಬರು ಮಹಿಳೆಯರ ಕೊಲೆಯಾಗಿದೆ. ಒಂದು ಪ್ರಕರಣದಲ್ಲಿ ತವರಿನಿಂದ ಹಣ, ಆಭರಣ ತರುವಂತೆ ಪತಿಯೇ ಪತ್ನಿಯನ್ನು ಕೊಲೆ ಮಾಡಿದರೆ, ಮತ್ತೊಂದು ಪ್ರಕರಣದಲ್ಲಿ ಮೊಬೈಲ್ನಲ್ಲಿ ಬೇರೆಯವರೊಂದಿಗೆ ಹೆಚ್ಚಾಗಿ ಮಾತನಾಡುತ್ತೀಯ ಎಂದು ಪತಿ ಜಗಳವಾಡಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಇದೀಗ ಇಬ್ಬರು ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ.

    ಚಾಕುವಿನಿಂದ ಇರಿದು ಕೊಲೆ


    Provided by
    Provided by

    ಯಾವಾಗಲೂ ಮೊಬೈಲ್  ನಲ್ಲಿ ಮಾತನಾಡುತ್ತೀಯ ಎಂದು ಪತ್ನಿ ಜತೆ ಜಗಳವಾಡಿದ ಪತಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.

    ನೇಪಾಳ ಮೂಲದ ಕಮಲಾದೇವಿ (45) ಕೊಲೆಯಾದ ದುರ್ದೈವಿ. ಈಕೆ ಪತಿ ತೇಜ್ ಬಹದ್ದೂರ್ (52)ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ನೇಪಾಳ ಮೂಲದ ಈ ದಂಪತಿ 20 ವರ್ಷದ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದು, ಮೊದಲು ಸಂಜಯನಗರದಲ್ಲಿ ವಾಸವಾಗಿದ್ದು, ಕಳೆದ ಮೂರು ವರ್ಷಗಳ ಹಿಂದೆ ಮನೆ ಬದಲಿಸಿ ಬಿ.ಚನ್ನಸಂದ್ರದಲ್ಲಿ ವಾಸವಾಗಿದ್ದು, ಇವರಿಗೆ ಒಬ್ಬ ಮಗ ಹಾಗೂ ಮಗಳಿದ್ದು, ಮಗಳನ್ನು ಮದುವೆ ಮಾಡಿಕೊಡಲಾಗಿದೆ.
    ಈ ಪ್ರದೇಶಕ್ಕೆ ಬಂದ ಕೆಲವೇ ದಿನಗಳಲ್ಲಿ ಪತ್ನಿ-ಮಗನನ್ನು ಬಿಟ್ಟು ತೇಜ್ ಬಹದ್ದೂರ್ ಬೇರೆ ಹೋಗಿದ್ದನು.

    ಬಿ.ಚನ್ನಸಂದ್ರದಲ್ಲಿ ತಾಯಿ-ಮಗ ಇಬ್ಬರೇ ವಾಸವಾಗಿದ್ದರು. ಮಗ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ತೇಜ್ ಬಹದ್ದೂರ್ ವಾಪಸ್ ಮನೆಗೆ ಬಂದು ನಿಮ್ಮ ಜತೆಯಲ್ಲಿರುವುದಾಗಿ ಹೇಳಿದ್ದಾನೆ.
    ಕಮಲಾದೇವಿ ಆಗಾಗ್ಗೆ ಬೇರೆಯವರೊಂದಿಗೆ ಮೊಬೈಲ್ ನಲ್ಲಿ ಮಾತನಾಡುವುದನ್ನು ಗಮನಿಸಿದ ಪತಿ ಈ ವಿಚಾರವಾಗಿ ಜಗಳವಾಡಿದ್ದಾನೆ. ನಿನ್ನೆ ಮಗ ಕೆಲಸಕ್ಕೆ ಹೋಗಿದ್ದಾಗ ಇದೇ ವಿಚಾರವಾಗಿ ದಂಪತಿ ನಡುವೆ ರಾತ್ರಿ 8:30ರ ಸುಮಾರಿನಲ್ಲಿ ಜಗಳವಾಗಿದೆ. ಆ ಸಂದರ್ಭದಲ್ಲಿ ತೇಜ್ ಬಹದ್ದೂರ್ ಅಡುಗೆ ಮನೆಯಲ್ಲಿದ್ದ ಚಾಕು ತೆಗೆದುಕೊಂಡು ಪತ್ನಿ ಹೊಟ್ಟೆ ಹಾಗೂ ಕಿಬ್ಬೊಟ್ಟೆಗೆ ಚುಚ್ಚಿ ಕೊಲೆ ಮಾಡಿದ್ದಾನೆ.

    ಅಕ್ಕಪಕ್ಕದವರು ಇವರ ಮನೆಯಲ್ಲಿ ಕೂಗಾಟ, ಕಿರುಚಾಟ ಕೇಳಿ ಮನೆ ಬಳಿ ಬಂದು ನೋಡಿದಾಗ ಕಮಲಾದೇವಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.ಸ್ಥಳಕ್ಕೆ ಆಗಮಿಸಿದ ರಾಮಮೂರ್ತಿನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಶವವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಿ ಆರೋಪಿ ತೇಜ್ ಬಹದ್ದೂರ್ನನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

    ವೇಲ್ ನಿಂದ  ಉಸಿರು ನಿಲ್ಲಿಸಿದ :

    ಪತ್ನಿಯ ಕುತ್ತಿಗೆ ಬಿಗಿದು ಕೊಲೆ ಮಾಡಿ, ಹೃದಯಾಘಾತವಾಗಿದೆ ಎಂದು ಬಿಂಬಿಸಿದ್ದ ಕಾರು ಚಾಲಕನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸುಂಕದಕಟ್ಟೆಯ ಮುನೇಶ್ವರನಗರ 7ನೇ ಕ್ರಾಸ್ ನಿವಾಸಿ ಸೌಮ್ಯಾ (25) ಕೊಲೆಯಾದ ನತದೃಷ್ಟೆ.

    ಈಕೆಯ ಪತಿ ಯೋಗೇಶ್ (25) ಪೊಲೀಸರ ವಶದಲ್ಲಿರುವ ಆರೋಪಿ.ಮೂಲತಃ ನಾಗಮಂಗಲ ಸಮೀಪದ ಬೆಳ್ಳೂರು ಕ್ರಾಸ್ ನಿವಾಸಿ ಯೋಗೇಶ್ ಕಾರು ಚಾಲಕ ವೃತ್ತಿ ಮಾಡುತ್ತಿದ್ದು, ಮೂರು ವರ್ಷದ ಹಿಂದೆ ಮಂಚೇನಹಳ್ಳಿಯ ನಿವಾಸಿ ಸೌಮ್ಯಾ ಅವರನ್ನು ಪ್ರೀತಿಸಿ ವಿವಾಹವಾಗಿದ್ದು, ಮುನೇಶ್ವರನಗರದಲ್ಲಿ ವಾಸವಾಗಿದ್ದರು.

    ಈ ನಡುವೆ ಕೆಲವು ದಿನಗಳಿಂದ ದಂಪತಿ ನಡುವೆ ಜಗಳವಾಗುತ್ತಿತ್ತು. ತವರಿನಿಂದ ಹಣ, ಒಡವೆ ತರುವಂತೆ ಸೌಮ್ಯಾಳಿಗೆ ಪತಿ ಪೀಡಿಸುತ್ತಿದ್ದುದ್ದರಿಂದ ತವರು ಮನೆಯವರು ಎರಡು ಬಾರಿ ಹಣ ಕೊಟ್ಟಿದ್ದಾರೆ. ಆದರೂ ಸಹ ಪದೇ ಪದೇ ಹಣಕ್ಕಾಗಿ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದನು.

    ತವರಿನಿಂದ 2 ಲಕ್ಷ ಹಣ ತರುವಂತೆ ಕಳೆದ ಮೂರು ದಿನಗಳಿಂದಲೂ ಸೌಮ್ಯಾ ಜೊತೆಯಲ್ಲಿ ಯೋಗೇಶ್ ಜಗಳವಾಡುತ್ತಿದ್ದನು. ನಿನ್ನೆ ಸಂಜೆ 5.30ರ ಸುಮಾರಿನಲ್ಲಿ ಮತ್ತೆ ಇದೇ ವಿಚಾರವಾಗಿ ಪತ್ನಿ ಜೊತೆ ಜಗಳವಾಡಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿದಾಗ ಒಂದು ಹಂತದಲ್ಲಿ ಕೈಗೆ ಸಿಕ್ಕಿದ ವೇಲ್ನಿಂದ ಸೌಮ್ಯಾಳ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.

    ನಂತರ ಸೌಮ್ಯಾ ಪೋಷಕರಿಗೆ ಯೋಗೇಶ್ ದೂರವಾಣಿ ಕರೆ ಮಾಡಿ ನಿಮ್ಮ ಮಗಳು ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆಂದು ತಿಳಿಸಿದ್ದಾನೆ. ಸೌಮ್ಯಾ ಪೋಷಕರು ಹಾಗೂ ಸಂಬಂಕರು ಮಗಳ ಮನೆ ಬಳಿ ಬಂದು ನೋಡಿ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

    ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಬ್ಯಾಡರಹಳ್ಳಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆ ವೇಳೆ ಸೌಮ್ಯಾ ತಾಯಿ ಮಗಳ ಸಾವಿನ ಬಗ್ಗೆ ಅನುಮಾನವಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಆ ಸಂದರ್ಭದಲ್ಲಿ ಯೋಗೇಶನನ್ನು ವಿಚಾರಣೆ ಮಾಡಿದಾಗ ಸೌಮ್ಯಾಳನ್ನು ಕೊಲೆ ಮಾಡಿರುವುದು ಗೊತ್ತಾಗಿದೆ.

    ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿರುವ ಪೊಲೀಸರು, ಸೌಮ್ಯಾ ಅವರ ತಾಯಿ ಜಯಮ್ಮ ನೀಡಿರುವ ದೂರನ್ನು ದಾಖಲಿಸಿಕೊಂಡು ಆರೋಪಿ ಯೋಗೇಶನನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026

    RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    March 9, 2026

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಕೊರಟಗೆರೆ: ಸುಪ್ರೀಂ ಕೋರ್ಟ್ ಆದೇಶವಿದ್ದರೂ ಒಳ ಮೀಸಲಾತಿ ಜಾರಿಗೊಳಿಸದೆ, ಹಳೆಯ ಪದ್ಧತಿಯಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು…

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.