ತಿಪಟೂರು: ಗುಬ್ಬಿ ತಾಲ್ಲೂಕು ‘ತುಮಕೂರು ಮಿತ್ರ’ ದಿನಪತ್ರಿಕೆ ವರದಿಗಾರ ರಮೇಶ್ ಗೌಡರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವ ಕೃತ್ಯ ಖಂಡಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಿಪಟೂರು ತಾಲೂಕು ಶಾಖೆಯಿಂದ ವತಿಯಿಂದ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ವಸ್ತುನಿಷ್ಠ ವರದಿ ನೀಡುವ ಪತ್ರಕರ್ತರ ಮೇಲೆ ಹಲ್ಲೆ ದೌರ್ಜನ್ಯ ಪ್ರಕರಣಗಳು ನಿರತವಾಗಿ ನಡೆಯುತ್ತಿವೆ. ಸರ್ಕಾರ ಪತ್ರಕರ್ತರ ರಕ್ಷಣೆಗೆ ಕಠಿಣ ಕಾನೂನು ರೂಪಿಸಿ ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕಿದೆ ಎಂದು ಇದೇ ವೇಳೆ ಒತ್ತಾಯಿಸಲಾಯಿತು
ವಸ್ತುನಿಷ್ಠ ಪ್ರಾಮಾಣಿಕ ಮಾಧ್ಯಮರಂಗ ಉಳಿಯಬೇಕಾದರೆ ಸರ್ಕಾರ ಪತ್ರಕರ್ತರಿಗೆ ಸೂಕ್ತ ಕಾನೂನು ರಕ್ಷಣೆ ನೀಡಬೇಕು ಎಂದು ಒತ್ತಾಯಿಸಲಾಯಿತು.
ಈ ಸಂದರ್ಭ ತಾಲೂಕು ಅಧ್ಯಕ್ಷ ಬಿ.ರಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಹಾಲ್ಕುರಿಕೆ ನಿರ್ದೇಶಕರಾದ ರಾಜಣ್ಣ ಉಪಸ್ಥಿತರಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700