ಗುಬ್ಬಿ: ಪಟ್ಟಣದ ಇತಿಹಾಸ ಪ್ರಸಿದ್ಧ ಗೋಸಲ ಚನ್ನಬಸವೇಶ್ವರ ಸ್ವಾಮಿ ಅವರ ರಥೋತ್ಸವದ ವೇಳೆ ದಾಸೋಹದ ಫೋಟೋ ಹಾಗೂ ವಿಡಿಯೋ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಪ್ರಜಾಪ್ರಗತಿ ಪತ್ರಿಕೆ ತಾಲೂಕು ವರದಿಗಾರರಾದ ರಾಜೇಶ್ ಗುಬ್ಬಿ ಅವರ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.
ಸ್ಥಳೀಯ ವ್ಯಕ್ತಿ ವಿಶ್ವನಾಥ್ ಎಂಬಾತ ವರದಿಗಾರ ರಾಜೇಶ್ ಗುಬ್ಬಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದು, ಪರಿಣಾಮವಾಗಿ ಅವರ ಕೈಗಳಿಗೆ ಹೆಚ್ಚು ಗಾಯವಾಗಿದೆ.
ಪತ್ರಕರ್ತ ರಾಜೇಶ್ ಗುಬ್ಬಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಗುಬ್ಬಿ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ದೂರು ದಾಖಲಿಸಲಾಗಿದೆ.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB