nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026
    Facebook Twitter Instagram
    ಟ್ರೆಂಡಿಂಗ್
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರ ಮೇಲಿನ ಹಲ್ಲೆ ಯತ್ನ ಖಂಡಿಸಿ ಕೆಯುಡಬ್ಲ್ಯೂಜೆ ವತಿಯಿಂದ ಬೃಹತ್ ಪ್ರತಿಭಟನೆ
    ಕೊರಟಗೆರೆ October 13, 2022

    ಪತ್ರಕರ್ತರ ಮೇಲಿನ ಹಲ್ಲೆ ಯತ್ನ ಖಂಡಿಸಿ ಕೆಯುಡಬ್ಲ್ಯೂಜೆ ವತಿಯಿಂದ ಬೃಹತ್ ಪ್ರತಿಭಟನೆ

    By adminOctober 13, 2022No Comments2 Mins Read
    kuwj

    ತುಮಕೂರು : ಪತ್ರಕರ್ತರ ಮೇಲೆ ಹಲ್ಲೆ ಯತ್ನ ನಡೆಸಿದ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯ ಕಿವಿ ಮೂಗು ಗಂಟಲು ತಜ್ಞ ಡಾ. ನವೀನ್ ಹಾಗೂ  ಪತ್ರಕರ್ತರ ವಿರುದ್ಧವೇ ಸುಳ್ಳು ಪ್ರಕರಣ ದಾಖಲಿಸಿದ ಪಿಎಸ್ ‌ಐ ನಾಗರಾಜ್ ವಿರುದ್ಧ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿವಿಧ ತಾಲ್ಲೂಕು ಘಟಕದ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಪ್ಪುಪಟ್ಟಿ ಧರಿಸಿ ಪತ್ರಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

    ಕೊರಟಗೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಅಪಘಾತಕ್ಕೊಳಗಾಗಿದ್ದ ರೋಗಿಯೊಬ್ಬರಿಗೆ ಚಿಕಿತ್ಸೆ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸಿದ ವೈದ್ಯರ ನಡೆಗೆ ಪತ್ರಕರ್ತರು ಆಸ್ಪತ್ರೆಗೆ ತೆರಳಿ ವರದಿ ಮಾಡಲು ವಿಡಿಯೋ ಮಾಡುತ್ತಿದ್ದ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯ ಡಾ.ನವೀನ್ ಎಂಬುವವರು ಪತ್ರಕರ್ತರ ಮೇಲೆ ಹಲ್ಲೆ ಯತ್ನ ನಡೆಸಿದ್ದು, ಪತ್ರಕರ್ತರ ಕಾರ್ಯನಿರ್ವಹಣೆಗೆ ಅಡ್ಡಿಪಡಿಸಿದ ವೈದ್ಯರನ್ನು ಕೂಡಲೇ ಅಮಾನತುಗೊಳಿಸಿ ಬಂಧಿಸಬೇಕೆಂದು ಕಾರ್ಯ ನಿರತ ಪತ್ರಕರ್ತರು ಆಗ್ರಹಿಸಿದರು.

    ನೂರಾರು ಸಂಖ್ಯೆಯಲ್ಲಿ ಸೇರಿದ ಪತ್ರಕರ್ತರು ವೈದ್ಯ ಡಾ.ನವೀನ್  ಹಾಗೂ ಸುಳ್ಳು ಪ್ರಕರಣ ದಾಖಲಿಸಿದ ಪಿ.ಎಸ್.ಐ. ನಾಗರಾಜು ಅವರನ್ನು ಕೂಡಲೇ ಅಮಾನತುಗೊಳಿಸಿ ಬಂಧಿಸಬೇಕೆಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಿ.ನಿ. ಪುರುಷೋತ್ತಮ್, ಅಪಘಾತಕ್ಕೊಳಗಾಗಿ ಸರಿಯಾಗಿ ಚಿಕಿತ್ಸೆ ಸಿಗದೆ ವ್ಯಕ್ತಿಗಳು ಪರದಾಡುತ್ತಿದ್ದ ವೇಳೆ ಸರಿಯಾಗಿ ಚಿಕಿತ್ಸೆ ನೀಡಿದ ಕೊರಟಗೆರೆ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ನವೀನ್ ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಜೊತೆಗೆ ಪತ್ರಕರ್ತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಸುಳ್ಳು ಪ್ರಕರಣ ದಾಖಲಿಸಿ ಪತ್ರಕರ್ತರು ನಿರ್ಭೀತಿಯಿಂದ ಕೆಲಸ ನಿರ್ವಹಿಸಲು ಸಾಧ್ಯವಾಗದ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದ್ದು, ಪತ್ರಿಕಾ ಸ್ವಾತಂತ್ರ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕೂಡಲೇ ಮಧ್ಯ ಪ್ರವೇಶಿಸಿ ಕಾರ್ಯನಿರತ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ವೈದ್ಯ ಡಾ.ನವೀನ್ ಹಾಗೂ ಸಿಬ್ಬಂದಿ ವರ್ಗ ಮತ್ತು ಪ್ರಕರಣದ ಬಗ್ಗೆ ಯಾವುದೇ ವಿಚಾರಣೆ ನಡೆಸದೆ ಎಫ್‌ಐಆರ್ ದಾಖಲಿಸಿದ ಪಿಎಸ್‌ ಐ ನಾಗರಾಜು ಅವರ ವಿರುದ್ಧ ಸೂಕ್ತ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.

    ಕೆಯುಡಬ್ಲ್ಯೂಜೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್ ಮಾತನಾಡಿ, ಪತ್ರಕರ್ತರ ಮೇಲೆ ಸಕಾರಣವಿಲ್ಲದೆ ಹಲ್ಲೆ ನಡೆಸಿರುವ ಕೊರಟಗೆರೆ ವೈದ್ಯ ಡಾ.ನವೀನ್ ಹಾಗೂ ಸುಳ್ಳು ಪ್ರಕರಣ ದಾಖಲಿಸಿರುವ ಪಿಎಸ್‌ಐ ನಾಗರಾಜ್ ಅವರನ್ನು ಕೂಡಲೇ ಅಮಾನತ್ತು ಮಾಡಬೇಕೆಂದು ಒತ್ತಾಯಿಸಿದರು.

    ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಈ ಬಗ್ಗೆ ಪರಿಶೀಲನೆ ನಡೆಸಿ, ಪ್ರಕರಣವನ್ನು ಶೀಘ್ರವಾಗಿ ಇತ್ಯರ್ಥಗೊಳಿಸುವುದಾಗಿ ಭರವಸೆ ನೀಡಿದರು.

    ನಂತರ ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ವಿದ್ಯಾಕುಮಾರಿ ಅವರಿಗೂ ಮನವಿ ಸಲ್ಲಿಸಲಾಯಿತು. ತದನಂತರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಎದುರು ಪತ್ರಕರ್ತರು ಪ್ರತಿಭಟನೆ ನಡೆಸಿ ವೈದ್ಯ ಡಾ.ನವೀನ್ ಮತ್ತು ಪಿಎಸ್‌ಐ ನಾಗರಾಜ್ ಅವರ ಅಮಾನತ್ತಿಗೆ ಆಗ್ರಹಿಸಿದರು.

    ಈ ಸಂಬಂಧ ಮನವಿಯನ್ನು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ್ ಮತ್ತು ಡಿಹೆಚ್‌ಒ ಕಚೇರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

    ಪ್ರತಿಭಟನೆಯಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ, ಹಿರಿಯ ಪತ್ರಕರ್ತರಾದ ಪುರುಷೋತ್ತಮ್ ಮೊದಲಿಯಾರ್, ತೋ.ಸಿ.ಕೃಷ್ಣಮೂರ್ತಿ, ಪಿ.ಎಸ್.ಮಲ್ಲಿಕಾರ್ಜುನಸ್ವಾಮಿ, ಎಸ್.ಡಿ.ಚಿಕ್ಕಣ್ಣ, ಸತೀಶ್ ಹಾರೋಗೆರೆ, ಮಂಜುನಾಥ್ ನಾಯಕ್, ಯಶಸ್, ಟಿ.ಹೆಚ್.ಸುರೇಶ್, ಸಿದ್ಧಲಿಂಗಸ್ವಾಮಿ, ದಶರಥ, ಮಣ್ಣೆರಾಜು, ಕುಚ್ಚಂಗಿ ಪ್ರಸನ್ನ, ತುರುವೇಕೆರೆ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ್ ದುಂಡ, ಕುಣಿಗಲ್ ತಾಲ್ಲೂಕು ಅಧ್ಯಕ್ಷ ರಂಗನಾಥ್, ಚಿ.ನಾ.ಹಳ್ಳಿ ತಾಲ್ಲೂಕು ಅಧ್ಯಕ್ಷ ಯೋಗೀಶ್, ಶಿರಾ ತಾಲ್ಲೂಕು ಅಧ್ಯಕ್ಷ ಜಯಪಾಲ್ ಸೇರಿದಂತೆ ನಗರ ಘಟಕ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಪತ್ರಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!

    September 20, 2026

    ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

    September 20, 2026

    ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ

    September 19, 2026

    Comments are closed.

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಔರಾದ್‌/ಬೀದರ್ : ಗ್ರಾಮೀಣ ಪ್ರದೇಶಗಳಲ್ಲಿ ವಿಬಿ–ಜಿ ರಾಮ್‌ ಜಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಎನ್‌ ಎಂಎಂಎಸ್‌ (NMMS)…

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.