ಕೊರಟಗೆರೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುವ ಪತ್ರಿಕಾ ರಂಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ಸೇವಾ ಭದ್ರತೆಯಿಲ್ಲದೆ ಇರುವುದು ಶೋಚನೀಯವಾಗಿದ್ದು ಸರ್ಕಾರ ಈ ನಿಟ್ಟಿನಲ್ಲಿ ಪತ್ರಕರ್ತರಿಗೆ ಭದ್ರತೆಯೊಂದಿಗೆ ಸವಲತ್ತು ನೀಡಬೇಕಿದೆ ಎಂದು ಸಿದ್ದರಬೆಟ್ಟದ ರಂಭಾಪುರಿ ಖಾಸಾ ಶಾಖಾ ಮಠದ ಶ್ರೀ ವೀರಭದ್ರಶಿವಾಚಾರ್ಯಸ್ವಾಮೀಜಿಗಳು ತಿಳಿಸಿದರು.
ಕೊರಟಗೆರೆ ಪಟ್ಟಣದ ಬೈಪಾಸ್ ಬೆಂಗಳೂರು- ಕೊರಟಗೆರೆ ರಸ್ತೆಯಲ್ಲಿರುವ ನವೀನ್ ಕಂಫರ್ಟ್ ಕಾಮಧೇನು ವೆಜ್ ಹೋಟೆಲ್ ಸಭಾಂಗಣದಲ್ಲಿ ನವರಸ ನಾಯಕ ಜಗ್ಗೇಶ್ ರವರ 59ನೇ ಹುಟ್ಟು ಹಬ್ಬದ ಅಂಗವಾಗಿ ಕೊರಟಗೆರೆಯ ಫ್ರೆಂಡ್ಸ್ ಗ್ರೂಪ್ ಮತ್ತು ಜಗ್ಗೇಶ್ ಅಭಿಮಾನಿ ಬಳಗ, ನೂತನವಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಆಯ್ಕೆಯಾದ ಸದಸ್ಯರಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪತ್ರಿಕಾರಂಗದಲ್ಲಿ ವೃತ್ತಿ ಧರ್ಮ ಬದ್ದತೆಯನ್ನು ಬಿಟ್ಟು ಕೊಡದೆ ಅನೇಕ ಕಷ್ಟ ಕಾರ್ಪಣ್ಯಗಳನ್ನು ಎದುರಿಸುವ ಪತ್ರಕರ್ತರಿಗೆ ಸೇವಾ ಭದ್ರತೆ ಅವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟರು.
ಪತ್ರಕರ್ತರು ನಿಷ್ಪಕ್ಷಪಾತ ವರದಿ ಮಾಡುವ ಮೂಲಕ ಸಮಾಜದಲ್ಲಿ ಕಾರ್ಯಾಂಗ, ಶಾಸಕಾಂಗ ಹಾಗೂ ನ್ಯಾಯಾಂಗ ಸಮರ್ಪಕವಾಗಿ ಕಾರ್ಯನಿರ್ವಸಲು ಸಹಕಾರಿಯಾಗಿದ್ದು, ಮುಂದಿನ ದಿನಗಳಲ್ಲೂ ನಿಸ್ಪಕ್ಷಪಾತ ವರದಿ ಮಾಡುವ ಮೂಲಕ ಸಮಾಜದಲ್ಲಿ ಸಾರ್ವಜನಿಕರ ಅಭಿವೃದ್ದಿಕಾರ್ಯಗಳಿಗೆ ಸಹಕಾರಿಯಾಗಬೇಕಿದೆ ಎಂದರು.
ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ.ಪುರುಷೋತ್ತಮ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರು ಹೆಚ್ಚು ರಾಜಕೀಯದಲ್ಲಿ ಸಕ್ರಿಯವಾಗಿ ಉತ್ಸಾಹದಿಂದ ಭಾಗವಹಿಸುವ ಮೂಲಕ ಸಮಾಜಿಕ ಸೇವಾಕಾರ್ಯಕ್ಕೆ ಹೊಸ ಚೇತನ್ಯ ದೊರೆಕಿದಂತಾಗಿದೆ. ಈ ನಿಟ್ಟಿನಲ್ಲಿ ಪತ್ರಕರ್ತರ ಸಂಘದ ಚುನಾವಣೆಯಲ್ಲೂ ಈ ಬಾರಿ ಯುವಕರು ಹೆಚ್ಚು ಚುನಾವಣೆಯಲ್ಲಿ ಸ್ಪರ್ದಿಸಿ ವಿಜೇತರಾಗಿದ್ದು. ಮುಂದಿನದಿನಗಳಲ್ಲಿ ಪತ್ರಿಕಾ ರಂಗದಲ್ಲಿನ ಅನೇಕ ನೂನ್ಯತೆಗಳನ್ನು ಸರಿಪಡಿಸಿ ಗ್ರಾಮೀಣ ಪತ್ರಕರ್ತರಿಗೆ ನೆರವಾಗುವಂತಹ ಕಾರ್ಯಕ್ರಮಗಳು ಹಮ್ಮಿಕೊಳ್ಳಲಿ ಎಂದು ಆಶಿಸಿದರು.
ಕೊರಟಗೆರೆ ತಾಲೂಕಿನ ಸೇವಾ ಮನೋಭಾವದಿಂದ ಕಾರ್ಯನಿರ್ವಸುತ್ತಿರುವ ಫ್ರೆಂಡ್ಸ್ ಗ್ರೂಪ್ ನ ಅಧ್ಯಕ್ಷ ರವಿಕುಮಾರ್ ಹಾಗೂ ಜಗ್ಗೇಶ್ ಅಭಿಮಾನಿ ಬಳಗದ ಅಧ್ಯಕ್ಷ ಮಲ್ಲಣ್ಣ ಸೇರಿದಂತೆ ಎಲ್ಲಾ ಪದಾಧಿಕಾರಿಗಳಿಗೆ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿರುವ ರಂಗಧಾಮಯ್ಯ, ಹೆಚ್.ಈ. ಸತೀಶ್ ಹಾರೋಗೆರೆ, ನಿರ್ದೇಶಕರಾಗಿ ಆಯ್ಕೆಯಾಗಿರುವ ಕೊರಟಗೆರೆ ನರಸಿಂಹಮೂರ್ತಿ, ಪ್ರಜಾ ಟಿ.ವಿ. ಯಶಸ್.ಕೆ.ಪದ್ಮನಾಭ್, ತೋ.ಚಿ.ಕೃಷ್ಣಮೂರ್ತಿ, ಪಬ್ಲಿಕ್ ಟಿ.ವಿ. ಮಂಜುನಾಥ್ ಹಾಗೂ 2022 ರಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರಶಸ್ತಿ ಪಡೆದ ಕೆ.ವಿ.ಪುರುಷೊತ್ತಮ್, ಹುಲಿಕುಂಟೆ ಗ್ರಾ.ಪಂ.ನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜಗ್ಗೇಶ್ ಅಭಿಮಾನಿ ಬಳಗದ ಅಧ್ಯಕ್ಷರಾದ ಮಲ್ಲಣ್ಣ ಅವರನ್ನು ಶ್ರೀ ವೀರಭದ್ರಶಿವಾಚಾರ್ಯಸ್ವಾಮೀಜಿಗಳು ಗೌರವಿಸಿ ಸನ್ಮಾನಿಸಿದರು.
ಈ ವೇಳೆ ಫ್ರೆಂಡ್ಸ್ ಗ್ರೂಪ್ ನ ಅಧ್ಯಕ್ಷ ರವಿಕುಮಾರ್, ಜಗ್ಗೇಶ್ ಅಭಿಮನಿ ಬಳಗದ ಅಧ್ಯಕ್ಷ ಮಲ್ಲಣ್ಣ, ಹಂಚಿಹಳ್ಳಿ ಗ್ರಾ.ಪಂ.ಅಧ್ಯಕ್ಷ ರಾಮಸ್ವಾಮಿ, ಹುಲಿಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ರಮೇಶ್, ಕೇಶವಮೂರ್ತಿ, ಕಾಕಿಮಲ್ಲಯ್ಯ, ಅಕ್ಷರದಾಸೂಹ ರಘು, ಫ್ರೆಂಡ್ಸ್ ಗ್ರೂಪ್ ಪದಾಧಿಕಾರಿಗಳಾದ ಮುರಳಿ, ಪ್ರದೀಪ್ಕುಮಾರ್, ಶಿವಶಂಕರ್, ಹೆಚ್.ರಾಜು, ಪತ್ರಕರ್ತರಾದ ಚಿದಂಬರ, ರಾಘವೇಂದ್ರ ದೇವರಾಜ್ ಕೆ. ಎನ್. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5