ಬೀದರ್: ಜಿಲ್ಲಾಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳು ಒದಗಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸೂಚನೆ ನೀಡಿದರು.
ಬೀದರ್ ಜಿಲ್ಲಾಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ, ರೋಗಿಗಳ ಕೋಣೆ ವೀಕ್ಷಿಸಿ, ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿ, ಕುಡಿಯುವ ನೀರು ಶೌಚಾಲಯ ಮತ್ತು ವೈದ್ಯಕೀಯ ಸೌಲಭ್ಯಗಳ ಕುರಿತು ರೋಗಿಗಳ ಜೊತೆ ಮಾತನಾಡಿದ ಅವರು, ರೋಗಿಗಳಿಗೆ ಇರುವ ಚಿಕಿತ್ಸಾ ಸೌಲಭ್ಯಗಳ ಬಗ್ಗೆ, ವೈದ್ಯಕೀಯ ಸೌಲಭ್ಯಗಳ ಬಗ್ಗೆ ಮತ್ತು ವ್ಯವಸ್ಥೆ ಬಗ್ಗೆ ಚರ್ಚೆ ಮಾಡಿದರು.
ಬ್ರಿಮ್ಸ್ ನ ಜಿಲ್ಲಾಸ್ಪತ್ರೆಯ ಅಧಿಕಾರಿಗಳು ಮತ್ತು ವೈದ್ಯರ ಜೊತೆ ಚರ್ಚೆ ನಡೆಸಿ ಕುಂದುಕೊರತೆ ಮತ್ತು ಸಮಸ್ಯೆಗಳ ಬಗ್ಗೆ ತಿಳಿದುಕೊಂಡು, ಅದಕ್ಕೆ ಅಗತ್ಯ ವಿರುವ ಪರಿಹಾರದ ಬಗ್ಗೆ ಸರ್ಕಾರಕ್ಕೆ ತಿಳಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಬ್ರಿಮ್ಸ್ ನಿರ್ದೇಶಕ ಡಾ.ಶಿವುಕುಮಾರ ಶೆಟ್ಕರ್, ಬ್ರಿಮ್ಸ್ ಡೀನ್ ಶಾಂತಲಾಕೌಜಲ್ಗಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4