ಸರಗೂರು: ಪಟ್ಟಣ ಪಂಚಾಯತಿ ಉಪಾಧ್ಯಕ್ಷ ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.
ಗುರುವಾರ ಈ ಘಟನೆ ನಡೆದಿದ್ದು, ಪಟ್ಟಣ ಪಂಚಾಯತಿ ಉಪಾಧ್ಯಕ್ಷ ವಿನಾಯಕ ಪ್ರಸಾದ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಿಜೆಪಿ ಮುಖಂಡ ಹಾಗೂ ಪಟ್ಟಣ ಪಂಚಾಯತಿ ಸದಸ್ಯೆ ಉಮಾ ಪತಿ ರಾಮು ಹಲ್ಲೆಗೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದೆ.
ಪಂಚಾಯತಿ ಮುಖ್ಯ ಅಧಿಕಾರಿ ಸತೀಶ್ ಅವರ ಹತ್ತಿರ ವಾರ್ಡ್ ಸಮಸ್ಯೆ ಬಗ್ಗೆ ರಾಮು ಚರ್ಚೆ ಮಾಡುತ್ತಿದ್ದ ಸಂದರ್ಭದಲ್ಲಿ ಉಪಾಧ್ಯಕ್ಷ ವಿನಾಯಕ ಪ್ರಸಾದ್, ಸದಸ್ಯ ಶಿವಕುಮಾರ್, ಅಧ್ಯಕ್ಷೆ ಪತಿ ಶ್ರೀನಾಥ್ ಎಂಬುವವರು ಏಕಾಏಕಿ ರಾಮು ಮೇಲೆ ರಕ್ತ ಬರುವಂತೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಘಟನೆಯ ಬಳಿಕ ಗಾಯಾಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಗಲಾಟೆ ಮಾಡಿಕೊಂಡ ಎಲ್ಲರೂ ಕೂಡ ಬಿಜೆಪಿ ಪಕ್ಷದವರು ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೋಲಿಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5