ತುರುವೇಕೆರೆ: ಕಲ್ಪತರು ನಾಡು ತುಮಕೂರು ಜಿಲ್ಲೆಯ, ತುರುವೇಕೆರೆ ತಾಲ್ಲೂಕಿನಲ್ಲಿ ಪ್ಲಾಸ್ಟಿಕ್ ಫ್ಲೆಕ್ಸ್ ಗಳು ಎಲ್ಲೆಂದರಲ್ಲಿ ಗೋಚರಿಸುತ್ತಿದ್ದು, ತಾಲ್ಲೂಕಿನ ಶಾಸಕರಾದ ಮಸಾಲ ಜಯರಾಮ್ ರವರ ಭಾವಚಿತ್ರಗಳಿರುವ ಫ್ಲೆಕ್ಸ್ ಗಳು ತಾಲ್ಲೂಕಿನ ತುಂಬೆಲ್ಲಾ ರಾರಾಜಿಸುತ್ತಿವೆ.
ತುರುವೇಕೆರೆ ಪಟ್ಟಣದ ತುಂಬೆಲ್ಲಾ ಎಗ್ಗಿಲ್ಲದೇ ಫ್ಲಕ್ಸ್ ಗಳು ಎದ್ದು ಕಾಣಿಸುತ್ತಿವೆ. ಈ ಹಿಂದೆಯೇ ಪಟ್ಟಣ ಪಂಚಾಯ್ತಿಯು ಫ್ಲಕ್ಸ್ ಬಳಕೆಗೆ ನಿಷೇಧ ಹೇರಿದ್ದರೂ ಇಲ್ಲಿನ ಜನಪ್ರತಿನಿಧಿಗಳು ಅದಕ್ಕೆ ಕವಡೆ ಕಾಸಿನ ಕಿಮ್ಮತ್ತೂ ನೀಡದೇ ಫ್ಲಕ್ಸ್ ಗಳನ್ನು ಪಟ್ಟಣದ ತುಂಬೆಲ್ಲಾ ಹಾಕಿಸಿದ್ದಾರೆ. ಪಟ್ಟಣ ಪಂಚಾಯ್ತಿಯು ಇವುಗಳನ್ನು ಕಂಡೂ ಕಾಣದಂತಿದೆ ಎನ್ನುವ ಮಾತುಗಳು ಆಕ್ರೋಶದ ಮಾತುಗಳು ಕೇಳಿ ಬಂದಿವೆ.
ಪ್ಲಾಸ್ಟಿಕ್ ನಿಷೇಧದ ಬಗ್ಗೆ ರಾಜ್ಯಾದ್ಯಂತ ಜಾಗೃತಿ ಮೂಡಿಸಲಾಗುತ್ತಿದ್ದರೆ, ಇತ್ತ ತುರುವೇಕರೆಯಲ್ಲಿ ಮಾತ್ರ ಪ್ಲಾಸ್ಟಿಕ್ ಫ್ಲೆಕ್ಸ್ ಗಳು, ಬಣ್ಣದ ಪ್ಲಾಸ್ಟಿಕ್ ಬಂಟಿಕ್ಸ್ ಗಳು ರಾರಾಜಿತ್ತಿವೆ. ಈ ಬಗ್ಗೆ ತಕ್ಷಣವೇ ಸಂಬಂಧಪಟ್ಟವರು ಕ್ರಮಕೈಗೊಳ್ಳಬೇಕು ಎನ್ನುವ ಒತ್ತಾಯ ಸಾರ್ವಜನಿಕರಿಂದ ಕೇಳಿ ಬಂದಿದೆ.
ವರದಿ: ವೆಂಕಟೇಶ ಜೆ.ಎಸ್. ( ವಿಕ್ಕಿ ) ಮಾಯಸಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy