ತುಮಕೂರು: ಪಟ್ಟನಾಯಕನಹಳ್ಳಿ ಜಾತ್ರೆ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪಟ್ಟನಾಯಕನಹಳ್ಳಿ ಶ್ರೀ ಓಂಕಾರೇಶ್ವರ ಸ್ವಾಮಿ ಜಾತ್ರಾ ಸಮಿತಿ ಸಹಯೋಗದಲ್ಲಿ ಜನವರಿ 25ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಶ್ರೀ ಗುರುಗುಂಡೇಶ್ವರ ಮಹಾ ಸಂಸ್ಥಾನ ಮಠದಲ್ಲಿ ಕಬಡ್ಡಿ ಪಂದ್ಯಾವಳಿ ಹಾಗೂ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ.
ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾವಳಿ ನಡೆಯಲಿದ್ದು, ವಿಜೇತರಿಗೆ ಪ್ರಥಮ–10000, ದ್ವಿತೀಯ–8000, ತೃತೀಯ–5000ರೂ.ಗಳ ನಗದು ಬಹುಮಾನವನ್ನು ನೀಡಲಾಗುವುದು.
ಜಾನಪದ ಗೀತೆ(ವೈಯಕ್ತಿಕ), ಭಾವಗೀತೆ(ವೈಯಕ್ತಿಕ), ಏಕಪಾತ್ರಾಭಿನಯ(ವೈಯಕ್ತಿಕ) ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದ್ದು, ವಿಜೇತರಿಗೆ ತಲಾ 1000 ರೂ.ಗಳ ಪ್ರಥಮ ಹಾಗೂ 500 ರೂ.ಗಳ ದ್ವಿತೀಯ ಬಹುಮಾನ ನೀಡಲಾಗುವುದು. ಆಸಕ್ತ ಕ್ರೀಡಾಪಟುಗಳು ಹಾಗೂ ಕಲಾವಿದರು ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9742894304/ 9980588415ನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4