ಉಡುಪಿ: ಶಾಲಾ ಪಠ್ಯ ಪುಸ್ತಕ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಉಡುಪಿಯಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸರ್ಕಾರ ಯಾವಾಗಲೂ ವ್ಯಕ್ತಿಗಳ ಆಧಾರದಲ್ಲಿ ನಡೆಯುವುದಿಲ್ಲ. ಶಾಸನದ ಆಧಾರದಲ್ಲಿ ಸರ್ಕಾರ ನಡೆಯುವುದು. ಸರ್ಕಾರ ಪರಿಶೀಲನೆ ಮಾಡದೆ ಪಠ್ಯ ಬದಲು ಮಾಡುವುದು ಸರಿಯಲ್ಲ.
ಬನ್ನಂಜೆ ಗೋವಿಂದಾಚಾರ್ಯರ ಪಾಠ ಹಿಂಪಡೆದಿದ್ದು ಖಂಡನಾರ್ಹ, 2009ರಲ್ಲಿ ಯುಪಿಎ ಸರ್ಕಾರ ಬನ್ನಂಜೆ ಅವರಿಗೆ ಪದ್ಮಶ್ರೀ ನೀಡಿತ್ತು. ಹೆಡ್ಗೆವಾರ್ ಪಾಠವನ್ನು ಸರ್ಕಾರ ವಾಪಸ್ ಪಡೆಯುವುದಾಗಿ ಹೇಳಿದೆ. ಚಕ್ರವರ್ತಿ ಸೂಲಿಬೆಲೆ ಪಾಠ ವಾಪಸ್ ಪಡೆಯುವುದಾಗಿ ಹೇಳುತ್ತಿದ್ದಾರೆ. ವೈಚಾರಿಕ ವಿಚಾರದ ಮೇಲೆ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಎಲ್ಲ ಬೆಳವಣಿಗೆಗಳನ್ನೂ ಬಿಜೆಪಿ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸದನದ ಒಳಗೆ ಮತ್ತು ಹೊರಗೆ ಸರ್ಕಾರಕ್ಕೆ ಮನವರಿಕೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


