ತುಮಕೂರು: ವಿದ್ಯುತ್ ಪ್ರವಹಿಸಿ 19 ಕುರಿಗಳು ಸಾವನ್ನಪ್ಪಿದ ಘಟನೆ ಪಾವಗಡ ತಾಲ್ಲೂಕಿನ ಶ್ರೀರಂಗಾಪುರ ಗ್ರಾಮದಲ್ಲಿ ನಡೆದಿದೆ.
ರೈತ ಮಂಜುನಾಥ್ ಎಂಬುವರಿಗೆ ಸೇರಿದ 19 ಕುರಿಗಳು ಸಾವನ್ನಪ್ಪಿದ್ದು, ರಾತ್ರಿ ಸುರಿದ ಮಳೆಯ ವೇಳೆ ಕುರಿ ಶೆಡ್ ಬಳಿ ಇದ್ದ ಕಂಬಕ್ಕೆ ವಿದ್ಯುತ್ ಪ್ರವಹಿಸಿದ್ದು, ಪರಿಣಾಮವಾಗಿ ಶೆಡ್ ನೊಳಗಿದ್ದ ಕುರಿಗಳು ಸಾವನ್ನಪ್ಪಿವೆ.
ಕುರಿಗಳ ಸಾವಿನಿಂದಾಗಿ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು, ರೈತ ಕಂಗಾಲಾಗಿದ್ದಾನೆ. ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA