ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಶ್ರೀನಿವಾಸ್ ಎಂಬವರಿಗೆ ಸೇರಿದ ಸೈಟ್ ವೊಂದಕ್ಕೆ ಸಂಬಂಧಿಸಿದಂತೆ ಗುರುವಾರ ಬುನಾದಿ ಹಾಕುವ ವಿಚಾರಕ್ಕೆ ಪಕ್ಕದ ಸೈಟ್ ಮಾಲಿಕ ನಾಗರಾಜ್ ಎಂಬುವವರು ಶ್ರೀನಿವಾಸ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ. ಸೈಟ್ ನಮಗೆ ಸೇರಿದ್ದು ಎಂದು ಆರೋಪಿಸಿ ಹಲ್ಲೆ ಮಾಡಲಾಗಿದೆ.
ಶ್ರೀನಿವಾಸ್ ರವರನ್ನು ಮಚ್ಚು ಹಾಗೂ ಕಲ್ಲುಗಳಿಂದ ಹಲ್ಲೆ ಮಾಡಿದ್ದು ಕಣ್ಣು ಹಾಗೂ ಕೈಗೆ ಗಾಯಗಳಾಗಿ ರಕ್ತ ಸ್ತ್ರಾವವಾಗಿ ಜಿಲ್ಲಾಸ್ವತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಬಗ್ಗೆ ದೂರು ನೀಡಿದರು ವೈ.ಎನ್.ಹೊಸಕೋಟೆ ಪೋಲಿಸರು ದೂರು ಪಡೆದಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q