ಪಾವಗಡ: ಬೋಲೆರೋ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಪಾವಗಡ ತಾಲ್ಲೂಕಿನ ಕಡಮಲಕುಂಟೆ ಕ್ರಾಸ್ ಬಳಿ ನಡೆದಿದ್ದು, ಇಬ್ಬರು ಬೈಕ್ ಸವಾರರು ಬಲಿಯಾಗಿ, ಓರ್ವನಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಪರಾರಿಯಾದ ವಾಹನವನ್ನು ಪೊಲೀಸರು ನಾಗಲಮಡಿಕೆ ಬಳಿ ಸೆರೆ ಹಿಡಿದಿದ್ದಾರೆ. ಬೈಕ್ ಅಪಘಾತಕ್ಕೆ ಬಲಿಯಾದವರು ಆಂಧ್ರಪ್ರದೇಶದ ಚಿನ್ನಕೋಟಪಲ್ಲಿಗೆ ಗ್ರಾಮಕ್ಕೆ ಸೇರಿದವರು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA