nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಅಭಿವೃದ್ಧಿ ಸಾಧನೆಗಳ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ; ಶಾಸಕ ವೆಂಕಟೇಶ್‌ ಗೆ ತಿಮ್ಮರಾಯಪ್ಪ ಸವಾಲು!

    November 25, 2026

    ಕೆಟಿವಿಎ ನಿಂದ ಸಮಾಜಮುಖಿ ಕಾರ್ಯಕ್ರಮ, ನ.30ಕ್ಕೆ ಮಕ್ಕಳಿಗೆ ಪ್ರತಿಭಾ ಪುರಸ್ಕಾರ | ಪುನೀತ್ ರಾಜ್ ಕುಮಾರ್ ಆಡಿಟೋರಿಯಂನಲ್ಲಿ ಅದ್ದೂರಿ ಕಾರ್ಯಕ್ರಮದಲ್ಲಿ ಧ್ರುವ ಸರ್ಜಾ ಭಾಗಿ

    November 25, 2026

    ಡಿ. 13ರಂದು ಹಾಸನಕ್ಕೆ ಸಿಎಂ ಆಗಮನ | ಹೊಳೆನರಸೀಪುರ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕ ಶ್ರಮ: ಸಂಸದ ಶ್ರೇಯಸ್ ಎಂ. ಪಟೇಲ್ ಭರವಸೆ

    November 25, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಅಭಿವೃದ್ಧಿ ಸಾಧನೆಗಳ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ; ಶಾಸಕ ವೆಂಕಟೇಶ್‌ ಗೆ ತಿಮ್ಮರಾಯಪ್ಪ ಸವಾಲು!
    • ಕೆಟಿವಿಎ ನಿಂದ ಸಮಾಜಮುಖಿ ಕಾರ್ಯಕ್ರಮ, ನ.30ಕ್ಕೆ ಮಕ್ಕಳಿಗೆ ಪ್ರತಿಭಾ ಪುರಸ್ಕಾರ | ಪುನೀತ್ ರಾಜ್ ಕುಮಾರ್ ಆಡಿಟೋರಿಯಂನಲ್ಲಿ ಅದ್ದೂರಿ ಕಾರ್ಯಕ್ರಮದಲ್ಲಿ ಧ್ರುವ ಸರ್ಜಾ ಭಾಗಿ
    • ಡಿ. 13ರಂದು ಹಾಸನಕ್ಕೆ ಸಿಎಂ ಆಗಮನ | ಹೊಳೆನರಸೀಪುರ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕ ಶ್ರಮ: ಸಂಸದ ಶ್ರೇಯಸ್ ಎಂ. ಪಟೇಲ್ ಭರವಸೆ
    • ಡಿಸೆಂಬರ್ 1ರಿಂದ ಆರ್ಥಿಕ ವಲಯದಲ್ಲಿ ಮಹತ್ವದ ಬದಲಾವಣೆ: ಕ್ರೆಡಿಟ್ ಕಾರ್ಡ್, ಆಧಾರ್, ಎಲ್‌ ಪಿಜಿ ಬಳಕೆದಾರರು ಗಮನಿಸಿ!
    • ಭಾರತದ ಮೊದಲ ಸಿನಿಮಾ ಹಾಲ್ ಯಾವ ನಗರದಲ್ಲಿತ್ತು? 1907ರಲ್ಲಿ ಆರಂಭವಾದ ಆ ಐತಿಹಾಸಿಕ ಚಿತ್ರಮಂದಿರದ ಕಥೆ ಇಲ್ಲಿದೆ!
    • ರಾತ್ರಿ ಎಷ್ಟು ಗಂಟೆಯೊಳಗೆ ಊಟ ಮಾಡಬೇಕು? ತಡವಾಗಿ ಊಟ ಮಾಡುವುದರಿಂದ ಆರೋಗ್ಯಕ್ಕೆ ಎದುರಾಗುವ ಸಮಸ್ಯೆಗಳೇನು?
    • ಎಸ್‌ ಬಿಐನಲ್ಲಿ ₹1 ಲಕ್ಷ ವೈಯಕ್ತಿಕ ಸಾಲ ಪಡೆದರೆ EMI ಎಷ್ಟು? ಬಡ್ಡಿದರದ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ!
    • ತಿಪಟೂರು: ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ದಬ್ಬಾಳಿಕೆ; ಬಡ ರೈತನ ಕುಟುಂಬ ಬೀದಿಗೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಅಭಿವೃದ್ಧಿ ಸಾಧನೆಗಳ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ; ಶಾಸಕ ವೆಂಕಟೇಶ್‌ ಗೆ ತಿಮ್ಮರಾಯಪ್ಪ ಸವಾಲು!
    ಪಾವಗಡ November 25, 2026

    ಪಾವಗಡ: ಅಭಿವೃದ್ಧಿ ಸಾಧನೆಗಳ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ; ಶಾಸಕ ವೆಂಕಟೇಶ್‌ ಗೆ ತಿಮ್ಮರಾಯಪ್ಪ ಸವಾಲು!

    By Ganesh TumkuruNovember 25, 2026No Comments3 Mins Read
    pavagada

    ಪಾವಗಡ : ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಹಾಲಿ ಶಾಸಕ ಎಚ್.ವಿ. ವೆಂಕಟೇಶ್ ಮತ್ತು ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ನಡುವೆ ರಾಜಕೀಯ ವಾಕ್ಸಮರಕ್ಕೆ ವೇದಿಕೆ ಸಿದ್ಧವಾಗಿದೆ. ತಮ್ಮ ಶಾಸಕತ್ವದ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳು ಹಾಗೂ ಹಾಲಿ ಶಾಸಕರ ಆಡಳಿತಾವಧಿಯ ಸಾಧನೆಗಳ ಕುರಿತು ಬಹಿರಂಗ ಚರ್ಚೆಗೆ ಸಿದ್ಧವಿರುವುದಾಗಿ ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ಸವಾಲು ಹಾಕಿದರು.

    ತಾಲೂಕಿನ ವೈ.ಎನ್. ಹೊಸಕೋಟೆಯ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಜೆಡಿಎಸ್ ಹೋಬಳಿ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

    ತಮ್ಮ ಶಾಸಕತ್ವದ ಅವಧಿಯಲ್ಲಿ ವಸತಿ ಶಾಲೆಗಳ ಸ್ಥಾಪನೆ, ಕೆಎಸ್ ಆರ್‌ ಟಿಸಿ ಡಿಪೋ, ಗ್ರಾಮೀಣ ರಸ್ತೆಗಳು, ಚರಂಡಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ತಮ್ಮ ಅವಧಿಯ ಸಾಧನೆ ಮತ್ತು ಹಾಲಿ ಶಾಸಕರ ಕಾರ್ಯವೈಖರಿಯನ್ನು ಸಾರ್ವಜನಿಕ ವೇದಿಕೆಯಲ್ಲಿ ಚರ್ಚಿಸಲು ಸಿದ್ಧ ಎಂದು ತಿಳಿಸಿದರು.

    ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ. ಅಂಜಿನಪ್ಪ ಮಾತನಾಡಿ, ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದರೂ ಸರ್ಕಾರ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಭದ್ರಾ ಮೇಲ್ದಂಡೆ ಯೋಜನೆಯಡಿ ಕೆರೆಗಳಿಗೆ ನೀರು ಹರಿಸುವ ಭರವಸೆ ಇನ್ನೂ ಈಡೇರಿಲ್ಲ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ರೈತರ ಪರಿಹಾರದ ವಿಚಾರದಲ್ಲಿ ಸರ್ಕಾರ ನಿರೀಕ್ಷಿತ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು. ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕರ್ತರು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

    ರಾಜ್ಯ ಉಪಾಧ್ಯಕ್ಷ ತಿಮ್ಮಾರೆಡ್ಡಿ ಮಾತನಾಡಿ, ಪಾವಗಡ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿದ್ದರೆ ಶಾಸಕರು ಅವುಗಳನ್ನು ಜನರ ಮುಂದಿಡಲಿ. ಜೆಡಿಎಸ್ ಆಡಳಿತಾವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಹೊರತುಪಡಿಸಿ ಕಾಂಗ್ರೆಸ್ ಸರ್ಕಾರದಿಂದ ಮಹತ್ವದ ಸಾಧನೆಯಾಗಿಲ್ಲ ಎಂದು ಟೀಕಿಸಿದರು.

    ಮಹಾ ಪ್ರಧಾನ ಕಾರ್ಯದರ್ಶಿ ಸೊಗಡು ವೆಂಕಟೇಶ್ ಮಾತನಾಡಿ, ಭದ್ರಾ ಮೇಲ್ದಂಡೆ ಹಾಗೂ ಎತ್ತಿನಹೊಳೆ ಯೋಜನೆಗಳ ನೀರು ಕೆರೆಗಳಿಗೆ ಯಾವಾಗ ಹರಿಯಲಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಗ್ರಾಮೀಣ ಪ್ರದೇಶಗಳಿಗೆ ತುಂಗಭದ್ರಾ ನೀರು ಸಮರ್ಪಕವಾಗಿ ತಲುಪುತ್ತಿಲ್ಲ. ತುಂಗಭದ್ರಾ ನೀರನ್ನು ಪಾವಗಡಕ್ಕೆ ತರುವಲ್ಲಿ ಮಾಜಿ ಶಾಸಕ ತಿಮ್ಮರಾಯಪ್ಪ ಅವರ ಕೊಡುಗೆ ಮಹತ್ವದ್ದಾಗಿದೆ ಎಂದರು.

    ಶಾಸಕರ ನಡವಳಿಕೆಗೆ ಜೆಡಿಎಸ್ ಮುಖಂಡರ ಆಕ್ಷೇಪ

    ರಾಜಶೇಖರಪ್ಪ ಮಾತನಾಡಿ, ಶಾಸಕ ಎಚ್.ವಿ. ವೆಂಕಟೇಶ್ ಅವರು ಜೆಡಿಎಸ್ ಮುಖಂಡರ ವಿರುದ್ಧ ವೈಯಕ್ತಿಕ ಟೀಕೆಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ರಾಜಕೀಯದಲ್ಲಿ ಹಿರಿಯರಿಗೆ ಗೌರವ ನೀಡಬೇಕು. ಜೆಡಿಎಸ್ ಮುಖಂಡರನ್ನು ಏಕವಚನದಲ್ಲಿ ಸಂಬೋಧಿಸುವುದು ಸಮಂಜಸವಲ್ಲ ಎಂದು ಹೇಳಿದರು.

    ಶಾಸಕರ ವಿರುದ್ಧ ಅಕ್ರಮ ಗಣಿಗಾರಿಕೆ, ಒತ್ತುವರಿ ಹಾಗೂ ರೈತರಿಗೆ ಅನ್ಯಾಯ ಮಾಡಿದ ಆರೋಪಗಳನ್ನು ಪ್ರಸ್ತಾಪಿಸಿದ ಅವರು, ವೈಯಕ್ತಿಕ ಆರೋಪ ಮಾಡುವ ಮೊದಲು ತಮ್ಮ ನಡೆ-ನುಡಿಗಳ ಬಗ್ಗೆಯೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದರು.

    ಕೋಟಗುಡ್ಡ ಅಂಜಪ್ಪ ಮಾತನಾಡಿ, ತಮ್ಮ ಬಗ್ಗೆ ವೈಯಕ್ತಿಕವಾಗಿ ಮಾತನಾಡಲು ಶಾಸಕರಿಗೆ ಅಧಿಕಾರ ನೀಡಿದವರು ಯಾರು ಎಂದು ಪ್ರಶ್ನಿಸಿದರು. ಕೆ.ಟಿ.ಹಳ್ಳಿ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಶಾಸಕರ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರಶ್ನಿಸಿದ್ದೇನೆ ಹೊರತು ವೈಯಕ್ತಿಕ ವಿಚಾರಗಳನ್ನು ಪ್ರಸ್ತಾಪಿಸಿಲ್ಲ. ತಮ್ಮ ವಿರುದ್ಧ ಸಾರ್ವಜನಿಕವಾಗಿ ಬಳಸಿದ ಆಕ್ಷೇಪಾರ್ಹ ಮಾತುಗಳು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣೆಗೆ ಬನ್ನಿ, ನಮ್ಮ ಶಕ್ತಿಯನ್ನು ತೋರಿಸುತ್ತೇವೆ ಎಂದು ಸವಾಲು ಹಾಕಿದರು.

     ಮತ ನೀಡಿದ್ದಕ್ಕೆ ಇಂದು ಪಶ್ಚಾತ್ತಾಪ: ನಿವೃತ್ತ ಯೋಧ ಹನುಮಪ್ಪ

    ನಿವೃತ್ತ ಸಿಆರ್‌ಪಿಎಫ್ ಯೋಧ ಹನುಮಪ್ಪ ಮಾತನಾಡಿ, ದೇಶದ ರಕ್ಷಣೆಗಾಗಿ ಗಡಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ತಾನು, ತಮ್ಮ ಬೋವಿ ಸಮುದಾಯದವರೇ ಎಂಬ ನಂಬಿಕೆಯಿಂದ ಶಾಸಕ ಎಚ್.ವಿ. ವೆಂಕಟೇಶ್ ಅವರಿಗೆ ಮತ ನೀಡಿದ್ದೆ. ಆದರೆ ಶಾಸಕರ ಇತ್ತೀಚಿನ ನಡವಳಿಕೆಯಿಂದ ಬೇಸರವಾಗಿದ್ದು, ಮತ ನೀಡಿದ ನಿರ್ಧಾರದ ಬಗ್ಗೆ ಇಂದು ಪಶ್ಚಾತ್ತಾಪವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಗ್ಯಾರಂಟಿಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಿಂದ ನಿರೀಕ್ಷಿತ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಮುಂಬರುವ ಚುನಾವಣೆಗಳಲ್ಲಿ ಜನರು ತಮ್ಮ ಅಭಿಪ್ರಾಯವನ್ನು ಮತದಾನದ ಮೂಲಕ ವ್ಯಕ್ತಪಡಿಸಬೇಕು ಎಂದು ಹೇಳಿದರು.

    ಕಾರ್ಯಕರ್ತರ ಸಮಾವೇಶದಲ್ಲಿ ಮುಖಂಡರ ಭಾಗಿ

    ಸಮಾವೇಶದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಎನ್.ಎ. ಈರಣ್ಣ, ಭೀಮನಕುಂಟೆ ಸತ್ಯಪ್ಪ, ರಾಯಚೆರ್ಲಪ್ಪ, ಬಲರಾಮ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ತುಮುಲ್ ನಿರ್ದೇಶಕ ಚನ್ನಮಲ್ಲಪ್ಪ, ಕೊತ್ತೂರು ನಾಗೇಶ್, ಲೋಕೇಶ್ ಪಾಳೇಗಾರ, ಬಲರಾಮರೆಡ್ಡಿ, ಅಕ್ಲಪ್ಪ ನಾಯ್ಡು, ಆಂಜಿನೇಯಲು, ಈರಣ್ಣ, ಅಂಬಿಕಾ ರಮೇಶ್, ನಲ್ಲಪ್ಪ, ಸುರೇಂದ್ರ, ಗಂಗಾಧರ್ ನಾಯ್ಡು ಸೇರಿದಂತೆ ಹಲವು ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಹಣ ಪಾವತಿಸಿದರೂ ಡ್ರಿಪ್ ಪರಿಕರ ವಿತರಣೆ ಇಲ್ಲ; ರೈತೋದಯ ಹಸಿರು ಸೇನೆ ಅಧ್ಯಕ್ಷ ಕುರಿಮಲ್ಲಪ್ಪ ಆಕ್ರೋಶ

    November 24, 2026

    ಪೊಲೀಸ್ ಠಾಣೆಯಲ್ಲೇ ಯುವಕನ ಮೇಲೆ ಚಾಕು ಇರಿತ!

    November 24, 2026

    ಕೇಂದ್ರ–ರಾಜ್ಯಗಳ ನಡುವಿನ ಉತ್ತಮ ಸಂಬಂಧವೇ ಬಲಿಷ್ಠ ಒಕ್ಕೂಟ ವ್ಯವಸ್ಥೆಗೆ ಆಧಾರ: ಡಾ.ಶ್ರೀಪಾದ ಕುಲಕರ್ಣಿ

    November 22, 2026

    Leave A Reply Cancel Reply

    Our Picks

    ಎಸ್‌ ಬಿಐನಲ್ಲಿ ₹1 ಲಕ್ಷ ವೈಯಕ್ತಿಕ ಸಾಲ ಪಡೆದರೆ EMI ಎಷ್ಟು? ಬಡ್ಡಿದರದ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ!

    November 25, 2026

    ಆಡಿಟ್ ಹೆಸರಿನಲ್ಲಿ ಉದ್ಯಮಿಗಳಿಗೆ ಕಿರುಕುಳ? ₹4 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು CGST ಅಧೀಕ್ಷಕರಿಗೆ ಸಿಬಿಐ ಶಾಕ್!

    November 24, 2026

    ಪೆಟ್ರೋಲ್ ಬಂಕ್‌ ನಲ್ಲಿ ₹110, ₹210 ಅಥವಾ ₹510ಕ್ಕೇ ಪೆಟ್ರೋಲ್ ಹಾಕಿಸುವುದೇಕೆ? ಇದರ ಹಿಂದಿದೆ ಆಸಕ್ತಿದಾಯಕ ಕಾರಣಗಳು!

    November 23, 2026

    ಮದುವೆ ಸೀಸನ್‌ ನಿಂದ ವ್ಯಾಪಾರಿಗಳಿಗೆ ಶುಕ್ರದೆಸೆ; ದೇಶಾದ್ಯಂತ 52 ಲಕ್ಷ ಮದುವೆಗಳ ನಿರೀಕ್ಷೆ: ಇಲ್ಲಿದೆ ಲೆಕ್ಕಾಚಾರ 

    November 23, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಅಭಿವೃದ್ಧಿ ಸಾಧನೆಗಳ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ; ಶಾಸಕ ವೆಂಕಟೇಶ್‌ ಗೆ ತಿಮ್ಮರಾಯಪ್ಪ ಸವಾಲು!

    November 25, 2026

    ಪಾವಗಡ : ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಹಾಲಿ ಶಾಸಕ ಎಚ್.ವಿ. ವೆಂಕಟೇಶ್ ಮತ್ತು ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ನಡುವೆ…

    ಕೆಟಿವಿಎ ನಿಂದ ಸಮಾಜಮುಖಿ ಕಾರ್ಯಕ್ರಮ, ನ.30ಕ್ಕೆ ಮಕ್ಕಳಿಗೆ ಪ್ರತಿಭಾ ಪುರಸ್ಕಾರ | ಪುನೀತ್ ರಾಜ್ ಕುಮಾರ್ ಆಡಿಟೋರಿಯಂನಲ್ಲಿ ಅದ್ದೂರಿ ಕಾರ್ಯಕ್ರಮದಲ್ಲಿ ಧ್ರುವ ಸರ್ಜಾ ಭಾಗಿ

    November 25, 2026

    ಡಿ. 13ರಂದು ಹಾಸನಕ್ಕೆ ಸಿಎಂ ಆಗಮನ | ಹೊಳೆನರಸೀಪುರ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕ ಶ್ರಮ: ಸಂಸದ ಶ್ರೇಯಸ್ ಎಂ. ಪಟೇಲ್ ಭರವಸೆ

    November 25, 2026

    ಡಿಸೆಂಬರ್ 1ರಿಂದ ಆರ್ಥಿಕ ವಲಯದಲ್ಲಿ ಮಹತ್ವದ ಬದಲಾವಣೆ: ಕ್ರೆಡಿಟ್ ಕಾರ್ಡ್, ಆಧಾರ್, ಎಲ್‌ ಪಿಜಿ ಬಳಕೆದಾರರು ಗಮನಿಸಿ!

    November 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.