nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಕೆರೆ ನೀರು ಅಕ್ರಮ ಬಳಕೆ ಆರೋಪ – ಗ್ರಾಮಸ್ಥರು ಹಾಗೂ ರೈತರ ತೀವ್ರ ಆಕ್ರೋಶ

    September 17, 2026

    ಕೊರಟಗೆರೆ ಅಬಕಾರಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಸಿದ್ಧರಬೆಟ್ಟದಲ್ಲಿ ಮಾದಕ ದ್ರವ್ಯ ನಿಗ್ರಹಕ್ಕೆ ಎದುರಾದ ಸವಾಲು

    September 17, 2026

    ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ

    September 17, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಕೆರೆ ನೀರು ಅಕ್ರಮ ಬಳಕೆ ಆರೋಪ – ಗ್ರಾಮಸ್ಥರು ಹಾಗೂ ರೈತರ ತೀವ್ರ ಆಕ್ರೋಶ
    • ಕೊರಟಗೆರೆ ಅಬಕಾರಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಸಿದ್ಧರಬೆಟ್ಟದಲ್ಲಿ ಮಾದಕ ದ್ರವ್ಯ ನಿಗ್ರಹಕ್ಕೆ ಎದುರಾದ ಸವಾಲು
    • ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ
    • ಕೊರಟಗೆರೆಯಲ್ಲಿ 5 ಕೋಟಿ ವೆಚ್ಚದ ನೂತನ ತಾ.ಪಂ. ಕಟ್ಟಡ ಕಾಮಗಾರಿ ವೀಕ್ಷಿಸಿದ ಡಿಸಿಎಂ ಜಿ. ಪರಮೇಶ್ವರ್
    • ಕೊರಟಗೆರೆಯಲ್ಲಿ ವಿಜೃಂಭಣೆಯಿಂದ ನಡೆದ ವಿಶ್ವಕರ್ಮ ಜಯಂತಿ: ಕುಶಲಕರ್ಮಿಗಳ ಸಬಲೀಕರಣಕ್ಕೆ ಒತ್ತು
    • ಬೀದರ್‌ ನಲ್ಲಿ ಸಡಗರದಿಂದ ಜರುಗಿದ 79ನೇ ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ
    • ಕೊರಟಗೆರೆ: ತಾ.ಪಂ. ನೂತನ ಕಟ್ಟಡ ಕಾಮಗಾರಿ ಪರಿಶೀಲಿಸಿದ ಡಾ.ಜಿ.ಪರಮೇಶ್ವರ್
    • ಮಧುಗಿರಿ: ಕೃಷಿ ಹೊಂಡ ಫಲಾನುಭವಿಗಳಿಗೆ ಮೀನು ಮರಿಗಳ ವಿತರಣೆ ಹಾಗೂ ‘ಅಕ್ಷರ ಅಮೃತ’ ಯೋಜನೆ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ
    ಪಾವಗಡ September 17, 2026

    ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ

    By Ganesh TumkuruSeptember 17, 2026No Comments1 Min Read
    pavagada drought

    ಪಾವಗಡ: ತಾಲ್ಲೂಕಿನಲ್ಲಿ ಮಳೆಯ ಕೊರತೆಯಿಂದಾಗಿ ಬರದ ಪರಿಸ್ಥಿತಿ ತೀವ್ರಗೊಂಡಿದ್ದು, ರೈತರ ಸಂಕಷ್ಟಕ್ಕೆ ಸರ್ಕಾರ ಹಾಗೂ ಅಧಿಕಾರಿಗಳು ಕೂಡಲೇ ಸ್ಪಂದಿಸಿ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಕುರಿಮಲ್ಲಪ್ಪ ಒತ್ತಾಯಿಸಿದ್ದಾರೆ.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಸಮರ್ಪಕ ಮಳೆಯಾಗದೆ ಕಳೆದ 25 ವರ್ಷಗಳಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಮಳೆಯಿಲ್ಲದೆ ಕಡಲೆಕಾಯಿ, ತೊಗರಿ, ರಾಗಿ ಮತ್ತು ಟೊಮ್ಯಾಟೊ ಸೇರಿದಂತೆ ಪ್ರಮುಖ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ಕೂಡಲೇ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

    ಭದ್ರಾ ಮೇಲ್ದಂಡೆ, ಹೇಮಾವತಿ ಹಾಗೂ ಎತ್ತಿನಹೊಳೆ ಯೋಜನೆಗಳ ನೀರನ್ನು ಪಾವಗಡಕ್ಕೆ ಹರಿಸುವ ಕಾಮಗಾರಿಗಳಿಗೆ ವೇಗ ನೀಡಬೇಕು ಮತ್ತು ಸೋಲಾರ್ ಕಂಪನಿಗಳು ಒತ್ತುವರಿ ಮಾಡಿಕೊಂಡಿರುವ ರೈತರ ಜಮೀನುಗಳ ದಾರಿ ಸಮಸ್ಯೆಯನ್ನು ತಕ್ಷಣ ಬಗೆಹರಿಸಬೇಕು ಎಂದು ಅವರು ತಿಳಿಸಿದರು.

    ಈ ಕುರಿತು ಮಾತನಾಡಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಪೂಜಾರಪ್ಪ, ಅಕ್ರಮ–ಸಕ್ರಮ ಜಮೀನುಗಳಿಗೆ ಸಂಬಂಧಿಸಿದಂತೆ ಫಾರಂ ನಂ. 50, 53 ಹಾಗೂ 57ರ ಅಡಿಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಬೇಕು ಎಂದರು. ಅಲ್ಲದೆ, ಸರ್ಕಾರ ಕೂಡಲೇ ರೈತರ ಸಾಲ ಮನ್ನಾ ಮಾಡಬೇಕು, ಎಲ್ಲಾ ವರ್ಗದ ಮಾಸಿಕ ಪಿಂಚಣಿಯನ್ನು ₹2,500ಕ್ಕೆ ಹೆಚ್ಚಿಸಬೇಕು ಹಾಗೂ ಮಾಜಿ ಸೈನಿಕರಿಗೆ ತಲಾ ಐದು ಎಕರೆ ಭೂಮಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

    ಸರ್ಕಾರ ಈ ಬೇಡಿಕೆಗಳನ್ನು ಈಡೇರಿಸುವಲ್ಲಿ ನಿರ್ಲಕ್ಷ್ಯ ವಹಿಸಿದರೆ, ರೈತರನ್ನು ಸಂಘಟಿಸಿ ಬೃಹತ್ ಪ್ರತಿಭಟನೆ ನಡೆಸಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ರಾಮಾಂಜಿ, ತಾಲ್ಲೂಕು ಅಧ್ಯಕ್ಷ ಶಿವು ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026

    ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ನೀರು: ಪಾವಗಡದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

    September 8, 2026

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಕೆರೆ ನೀರು ಅಕ್ರಮ ಬಳಕೆ ಆರೋಪ – ಗ್ರಾಮಸ್ಥರು ಹಾಗೂ ರೈತರ ತೀವ್ರ ಆಕ್ರೋಶ

    September 17, 2026

    ಕೊರಟಗೆರೆ: ಮಳೆಯಿಲ್ಲದೆ ಕಂಗೆಟ್ಟಿರುವ ಜನ-ಜಾನುವಾರುಗಳು ಹಾಗೂ ಮೂಕಪ್ರಾಣಿಗಳಿಗೆ ಕುಡಿಯುವ ನೀರಿಗೂ ತೀವ್ರ ತೊಂದರೆ ಉಂಟಾಗಿರುವಂತೆಯೇ, ರಾತ್ರಿ ವೇಳೆಯಲ್ಲಿ ಕೆರೆಯ ನೀರನ್ನು…

    ಕೊರಟಗೆರೆ ಅಬಕಾರಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಸಿದ್ಧರಬೆಟ್ಟದಲ್ಲಿ ಮಾದಕ ದ್ರವ್ಯ ನಿಗ್ರಹಕ್ಕೆ ಎದುರಾದ ಸವಾಲು

    September 17, 2026

    ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ

    September 17, 2026

    ಕೊರಟಗೆರೆಯಲ್ಲಿ 5 ಕೋಟಿ ವೆಚ್ಚದ ನೂತನ ತಾ.ಪಂ. ಕಟ್ಟಡ ಕಾಮಗಾರಿ ವೀಕ್ಷಿಸಿದ ಡಿಸಿಎಂ ಜಿ. ಪರಮೇಶ್ವರ್

    September 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.