ಪಾವಗಡ: ಶ್ರೀ ಗುರುಕುಲ ಪದವಿ ಪೂರ್ವ ಕಾಲೇಜು ಪಾವಗಡ ಮತ್ತು ಎಂಪ್ರೆಸ್ ಪದವಿ ಪೂರ್ವ ಕಾಲೇಜು ಲಿಂಗದಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಪಾವಗಡ ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜರುಗಿದ 2024–25 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಹೆಚ್.ವಿ.ವೆಂಕಟೇಶ್ ಭಾಗವಹಿಸಿ, ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ನಂತರ ತಾಲ್ಲೂಕು ಪದವಿ ಪೂರ್ವ ಕಾಲೇಜುಗಳ ಒಕ್ಕೂಟದಿಂದ ಶಾಸಕರಿಗೆ ಸನ್ಮಾನಿಸಿ ಗೌರವಿಸಿ ನೆನಪಿನ ಕಾಣಿಗೆ ನೀಡಿದರು.
ಈ ವೇಳೆ ಪುರಸಭಾ ಅಧ್ಯಕ್ಷರಾದ ಪಿ.ಹೆಚ್.ರಾಜೇಶ್, ಸದಸ್ಯರಾದ ಕಲ್ಪವೃಕ್ಷ ರವಿ,ಗೊರ್ತಿ ನಾಗರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಣಮ್ಮ, ರಿಜ್ವಾನ್ ಉಲ್ಲಾ, ಬೋರಣ್ಣ, ಮಂಜುನಾಥ್, ಆಲಿ, ವೀರೇಂದ್ರ ಸೇರಿ ಇನ್ನೂ ಮುಂತಾದವರು ಇದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q