nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
    ಪಾವಗಡ May 11, 2026

    ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ

    By adminMay 11, 2026No Comments2 Mins Read

    ಪಾವಗಡ: ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಮ್ ಯುವಕ ಸಂಘದ ಕರೆಕ್ಯಾತನಹಳ್ಳಿ ವತಿಯಿಂದ ಅಂಬೇಡ್ಕರ್ ಅವರ 135ನೇ ಜನ್ಮದಿನ ಆಚರಿಸಲಾಯಿತು. ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಶಾಸಕ ಹೆಚ್.ವಿ. ವೆಂಕಟೇಶ್ ಹಾಗೂ ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ಕಾರ್ಯಕ್ರಮ ಉದ್ಘಾಟಿಸಿದರು.

    ಕರೆಕ್ಯಾತನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಅವರ 135ನೇ ಜನ್ಮದಿನವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಹೆಚ್.ವಿ. ವೆಂಕಟೇಶ್, ಕಳೆದ 30 ವರ್ಷಗಳಿಗೆ ಹೋಲಿಸಿದರೆ ಇಂದಿನ ಜನಜೀವನ ಎಲ್ಲಾ ಹಂತದಲ್ಲಿಯೂ ಸ್ವಲ್ಪ ಮಟ್ಟಿಗೆ ಸುಧಾರಣೆ ಕಂಡಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಹೆಚ್ಚು ಗಮನ ಹರಿಸಬೇಕು. ತಾಲೂಕಿನ ಯಾವುದೇ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದು, ಯಾವುದೇ ಸಮಸ್ಯೆ ಇದ್ದರೆ ನೇರವಾಗಿ ನನ್ನ ಗಮನಕ್ಕೆ ತರಬೇಕು. ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ತಿಳಿಸಿದರು.


    Provided by
    Provided by

    ತುಮಕೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಡಾ. ಕೊಟ್ಟ ಶಂಕರ್ ಮಾತನಾಡಿ, ದಲಿತರಿಗೆ ವಿಮೋಚನೆ ದಾರಿ ತೋರಿಸಿದವರೇ ಡಾ. ಬಾಬಾ ಸಾಹೇಬ್ ಅಂಬೇಡ್ಕರ್. ಬಹುದೊಡ್ಡ ಸಂವಿಧಾನವನ್ನು ದೇಶಕ್ಕೆ ನೀಡಿದ ದಲಿತರಿಗೆ ರಾಜಕೀಯವಾಗಿ ಬೆಳೆಯಲು ಸಾಧ್ಯವಾಗಿಲ್ಲ. ಕೇವಲ ರಾಜಕೀಯವು ಕೆಲವು ವರ್ಗಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಹೇಳಿದರು.

    ಎಸ್‌ ಸಿ ಘಟಕದ ಮಾಜಿ ಜಿಲ್ಲಾಧ್ಯಕ್ಷ ಈ. ಶಿವಣ್ಣ ಮಾತನಾಡಿ, ಕೇಂದ್ರ ಸರ್ಕಾರ ಸಂವಿಧಾನದ ಮೇಲೆ ದಾಳಿ ನಡೆಸುತ್ತಿದೆ. ಕಳೆದ ಹತ್ತು ವರ್ಷದಲ್ಲಿ ದೇಶದಲ್ಲಿ ದಲಿತರ ಮೇಲೆ ವ್ಯಾಪಕವಾದ ದಬ್ಬಾಳಿಕೆ ಮತ್ತು ದೌರ್ಜನ್ಯಗಳು ನಡೆದಿವೆ. ದಲಿತರ ಅಭಿವೃದ್ಧಿಗಾಗಿ ಇದುವರೆಗೂ ವಿಶೇಷವಾದ ಸಂಸತ್ ಅಧಿವೇಶನ ನಡೆದಿಲ್ಲ. ದಲಿತರನ್ನು ಕೇವಲ ಮತಬ್ಯಾಂಕ್ ರಾಜಕಾರಣಕ್ಕಾಗಿ ಉಪಯೋಗಿಸಿಕೊಳ್ಳಲಾಗುತ್ತಿದೆ. ದೇಶದ ನೈಜ ಸಮಸ್ಯೆಗಳನ್ನು ಕುರಿತು ಪ್ರಧಾನಿ ನರೇಂದ್ರ ಮೋದಿ ಒಂದು ದಿನವೂ ಸಹ ಮಾತನಾಡುತ್ತಿಲ್ಲ. ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಆವೇಶದಿಂದ ಮಾತನಾಡುತ್ತಾರೆ. ದಲಿತರ ರಕ್ಷಣೆಗಾಗಿ ಮತ್ತು ಸಂವಿಧಾನದ ರಕ್ಷಣೆಗಾಗಿ ಕೇಂದ್ರ ಸರ್ಕಾರ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ ಎಂದು ದೂರಿದರು.

    ರಾಜಕೀಯವು ಯಾರಿಗೂ ಶಾಶ್ವತವಾದುದ್ದಲ್ಲ. ಎಲ್ಲರೂ ಸಮಾನವಾಗಿ ಬದುಕಬೇಕು. ನನ್ನ ಅವಧಿಯಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಮುಂದೆಯೂ ಸಹ ಜನ ಆಶೀರ್ವಾದ ಮಾಡಿದರೆ ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇನೆ ಎಂದು ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ಭರವಸೆ ನೀಡಿದರು.

    ಎಸ್‌ ಎಸ್‌ ಎಲ್‌ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಿ ನಗದು ಬಹುಮಾನ ನೀಡಲಾಯಿತು. ಕೆಂಚರಾಯ, ನಾಗರಾಜ, ಕಾರ್ಯದರ್ಶಿ ಸಿ. ಶಿವಣ್ಣ, ಅಧ್ಯಕ್ಷ ಕೆ.ಎಸ್. ಶಿವಕುಮಾರ್, ವಕೀಲ ಕೆ.ಒ.ಶಿವಣ್ಣ, ಗ್ರಾ.ಪಂ. ಮಾಜಿ ಸದಸ್ಯ ಸ್ವರ್ಣಮ್ಮ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಸುನೀತ, ಸಿ.ಕೆ. ತಿಪ್ಪೇಸ್ವಾಮಿ, ವೆಂಕಟರವಣಪ್ಪ, ಟಿ. ಹನುಮಂತರಾಯ ಇದ್ದರು.

    ಭಾರತದ ಸಂವಿಧಾನವು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಎಲ್ಲಾ ಜಾತಿ ಧರ್ಮಗಳಿಗೂ ಸಮಾನವಾದ ಅವಕಾಶವನ್ನು ನೀಡಿದೆ. ಉನ್ನತ ಶಿಕ್ಷಣದಲ್ಲಿ ಮೀಸಲಾತಿ ಜಾರಿ ಇರುವುದರಿಂದ ಕೆಳವರ್ಗದ ಬಹುತೇಕ ವಿದ್ಯಾರ್ಥಿಗಳು ಇಂಜಿನಿಯರಿಂಗ್, ಮೆಡಿಕಲ್ ಹೀಗೆ ವಿದ್ಯೆ ಪಡೆಯುವಂತಾಯಿತು.

    — ಹೆಚ್.ವಿ. ವೆಂಕಟೇಶ್, ಶಾಸಕರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ

    June 8, 2026

    ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ

    June 6, 2026

    ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ

    June 5, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.