ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ನಾಗರಮಿಕೆ ಹೋಬಳಿಯ ಕೆ.ಸೇವಾಲ್ ಪುರ ಗ್ರಾಮದಲ್ಲಿ ನೆಲೆಸಿರುವ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ ನಾಲ್ಕನೇ ವರ್ಷದ ಅದ್ದೂರಿ ವಾರ್ಷಿಕೋತ್ಸವವು ಜೂನ್ 25 ರಂದು ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ.
ದೇವಾಲಯದ ವಾರ್ಷಿಕೋತ್ಸವದ ಅಂಗವಾಗಿ ಅಂದು ದಿನವಿಡೀ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 6:00 ಗಂಟೆಗೆ: ಜಗನ್ಮಾತೆಗೆ ವಿಶೇಷ ಅಭಿಷೇಕ ಹಾಗೂ ಮಹಾಮಂಗಳಾರತಿ ನೆರವೇರಲಿದೆ.
ಸಂಜೆ 5:00 ಗಂಟೆಯಿಂದ: ದೇವಿಗೆ ವಿಶೇಷ ಪೂಜಾ ಕೈಂಕರ್ಯಗಳು ಆರಂಭವಾಗಲಿದ್ದು, ತದನಂತರ ಭಕ್ತಾದಿಗಳಿಗೆ ಮಹಾಪ್ರಸಾದ ವಿತರಣೆ ಏರ್ಪಡಿಸಲಾಗಿದೆ.
ಈ ಶುಭ ಸಂದರ್ಭದಲ್ಲಿ ಕವಿತಾ ಡಾ.ಡಿ.ಪರಮೇಶ್ ನಾಯ್ಡು ಅವರ ಕುಟುಂಬಸ್ಥರು, ಕೆ.ಸೇವಾಲ್ ಪುರ ಗ್ರಾಮಸ್ಥರು ಹಾಗೂ ದೇವಾಲಯದ ಭಕ್ತ ಮಂಡಳಿಯವರು ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಗೆ ಮತ್ತು ಭಕ್ತಾದಿಗಳಿಗೆ ಭಕ್ತಿಪೂರ್ವಕ ಸ್ವಾಗತ ಕೋರಿದ್ದಾರೆ. ಎಲ್ಲ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಆಯೋಜಕರು ವಿನಂತಿಸಿದ್ದಾರೆ.
ವರದಿ: ನಂದೀಶ್ ನಾಯ್ಕ ಪಿ., ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


