ಪಾವಗಡ: ತಾಲೂಕಿನ ಕಡಮಲಕುಂಟೆ ಕೈಗಾರಿಕಾ ಪ್ರದೇಶದ ಪೆನುಕೊಂಡ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಪಾವಗಡದಿಂದ ಪೆನುಕೊಂಡದ ಕಡೆಗೆ ಸಾಗುತ್ತಿದ್ದ ಇನೋವಾ ಕಾರು ಹಾಗೂ ಪೆನುಕೊಂಡದಿಂದ ಪಾವಗಡದ ಕಡೆ ಬರುತ್ತಿದ್ದ ಎಪಿಎಸ್ ಆರ್ ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬಸ್ ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದ್ದು ಕಾರು ನಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಇನೋವಾ ಕಾರಿನ ಚಾಲಕ, ಐವಾರ್ಲಹಳ್ಳಿ ಗ್ರಾಮದ ನಿವಾಸಿ ರಾಜಶೇಖರ್ ರೆಡ್ಡಿ (40) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 25 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಮಾಹಿತಿ ತಿಳಿದ ಕೂಡಲೇ ಪಾವಗಡ ಪೊಲೀಸ್ ಠಾಣೆಯ ಸಿಐ ಸುರೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


