ಪಾವಗಡ: ಪಟ್ಟಣದ ಹೊರವಲಯದ ಶಿರಾ ರಸ್ತೆ, ಕುರುಬರಹಳ್ಳಿ ಗೇಟ್ ಬಳಿ ಇರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಪ್ರಾಂಶುಪಾಲರ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಇದೇ ಬರುವ ಮೇ 29, 2026ರ ಶುಕ್ರವಾರ ಬೆಳಿಗ್ಗೆ 10:00 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ.
ಕಾಲೇಜಿನ ಪ್ರಾಂಶುಪಾಲರಾದ ಡಾ. ಶಿವಾನಂದಯ್ಯ ಎನ್.ಸಿ. ಹಾಗೂ ನಿಕಟಪೂರ್ವ ಪ್ರಾಂಶುಪಾಲರಾದ ಪ್ರೊ. ಮಾರಪ್ಪ ಕೆ.ಬಿ. ಅವರಿಗೆ ಕಾಲೇಜಿನ ವತಿಯಿಂದ ಗೌರವಪೂರ್ವಕವಾಗಿ ಬೀಳ್ಕೊಡುಗೆ ನೀಡಲಾಗುತ್ತಿದೆ ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.
ಈ ಸಮಾರಂಭದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗ, ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಹಾಗೂ ಹಳೆಯ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ. ಸಾರ್ವಜನಿಕರು, ಹಿತೈಷಿಗಳು ಮತ್ತು ಶಿಕ್ಷಣ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕಾಲೇಜು ಆಡಳಿತ ಮಂಡಳಿ ಕೋರಿದೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


