ಪಾವಗಡ: ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಹೆಲ್ಪ್ ಸೊಸೈಟಿ, ಸೇವಾ ಟ್ರಸ್ಟ್ ವತಿಯಿಂದ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಗುರುವಾರ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಯಿತು.
ಶಿಬಿರದಲ್ಲಿ ಕಣ್ಣಿಗೆ ಸಂಬಂಧ ಪಟ್ಟ ತೊಂದರೆಗಳಿಗೆ ಪರೀಕ್ಷೆಗಳನ್ನು ನಡೆಸಲಾಯಿತು. ಶಿಬಿರದಲ್ಲಿ ಕಣ್ಣಿಗೆ ಸಂಬಂಧಪಟ್ಟ ತೊಂದರೆಗಳಿಗೆ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದ 58 ರೋಗಿಗಳಿಗೆ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಶಿಬಿರದ ಕಾರ್ಯಕ್ರಮಕ್ಕೆ ಜನ ಶಿಕ್ಷಣ ಸಂಸ್ಥೆ ತುಮಕೂರು ನಿರ್ದೇಶಕರಾದ ಸುಕನ್ಯಾ ರವರು ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಬ್ಯಾಂಕ್ ಕೌನ್ಸಿಲಿಂಗ್ ನಾಗಲಕ್ಷ್ಮಿ, ಸೇವಾ ಟ್ರಸ್ಟಿನ ಸಂಧ್ಯಾ, ಶಂಕರ ಕಣ್ಣಿನ ಆಸ್ಪತ್ರೆ ವೈದ್ಯರಾದ ಅನುರಾಧ, ಮೌನಿಕ, ಮೇಲ್ವಿಚಾರಕರಾದ ಹರೀಶ್, ಸಾರ್ವಜನಿಕ ಆಸ್ಪತ್ರೆಯ ಪವಿತ್ರ, ಮುಖಂಡರಾದ ಪ್ರಕಾಶ್ ರೆಡ್ಡಿ, ಅಮಿಲಿನೆನಿ ನರೇಶ್, ಕೃಷ್ಣಪ್ಪ, ತಿರುಮನಿ ಆಸ್ಪತ್ರೆ ರಮೇಶ್, ಮಂಜುನಾಥ, ಶಾಮಣ್ಣ, ಲೋಕೇಶ, ಇದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx