ಪಾವಗಡ: ಪರಿಶಿಷ್ಟಜಾತಿ ಮತ್ತು ಪರಿಶಿಷ್ಟವರ್ಗಗಳ ಶ್ರೇಯಸ್ಸಿ ಗಾಗಿ ಗಣನೀಯಸೇವೆ ಸಲ್ಲಿಸಿದ ವ್ಯಕ್ತಿಗಳನ್ನು ಗುರುತಿಸಿ ರಾಜ್ಯ ಮಟ್ಟದಲ್ಲಿ ಸನ್ಮಾನಿಸಲು ಸರ್ಕಾರ ತೀರ್ಮಾನಿಸಿದ್ದು, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಏಪ್ರಿಲ್ 5ರಂದು ನಡೆಯುವ ಬಾಬು ಜಗಜೀವನರಾಮ್ ಅವರ 119ನೇ ಜಯಂತಿ ಹಾಗೂ ಏಪ್ರಿಲ್ 14ರಂದು ನಡೆಯುವ ಡಾ. ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಸಮಾಜಸೇವೆ, ಶಿಕ್ಷಣ, ಸಮಾನತೆ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಕ್ಷೇತ್ರದಲ್ಲಿ ವಿಶೇಷ ಸೇವೆ ಸಲ್ಲಿಸಿದವರನ್ನು ಪ್ರಶಸ್ತಿಗೆ ಆಯ್ಕೆಮಾಡಲಾಗುತ್ತದೆ.
ಅರ್ಹರು ತಮ್ಮ ಸೇವಾ ವಿವರಗಳು ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಮಾರ್ಚ್ 8ರೊಳಗಾಗಿ ತಾಲೂಕುಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಲು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಜಿ.ಇ.ಮಲ್ಲಿಕಾರ್ಜುನಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


