ಪಾವಗಡ: ಪಟ್ಟಣದ ಶ್ರೀನಿವಾಸನಗರದಲ್ಲಿರುವ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವವನ್ನು ಅದ್ದೂರಿಯಾಗಿ ಆಯೋಜನೆ ಮಾಡಲಾಯಿತು.
ಪ್ರಥಮ ವರ್ಷದ ವಿದ್ಯಾರ್ಥಿಗಳಿಂದ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಸಹ ಮಾಡಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಡಾ.ಶಶಿಕಿರಣ್ ಅವರು ನೆರವೇರಿಸಿದ ಬಳಿಕ ಮಾತನಾಡಿದ ಅವರು, ಈ ವರ್ಷದ ನಮ್ಮ ಕಾಲೇಜಿನ ಫಲಿತಾಂಶ ಶೇಕಡ ನೂರಕ್ಕೆ ನೂರು ತರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ತಿಳಿಸಿದರು.
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಾಡಲಾಯಿತು. ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ನಾಗೇಂದ್ರ, ಉಪ ಪ್ರಾಂಶುಪಾಲರಾದ ನಾಗರಾಜು, ಸ್ವಾಮಿ ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ, ಉಳಿದ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಿ., ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4