ತುಮಕೂರು: ಪಿಡಿಓ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಸಿನಿಮಾ ರೀತಿಯಲ್ಲಿ ಕಾಪಿ ಹೊಡೆಯಲು ಹೋಗಿ ಸಿಕ್ಕಿಬಿದ್ದ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಬೆಂಗಳೂರಿನ ರಾಮಮೂರ್ತಿ ನಗರ ಮೂಲದ ಧರ್ಮೆಂದ್ರ (33) ಎಂಬ ಯುವಕ ಪಿಡಿಓ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದ ಪರೀಕ್ಷಾರ್ಥಿಯಾಗಿದ್ದು, ಪರೀಕ್ಷಾ ಮೇಲ್ವಿಚಾರಕರ ಕಣ್ತಪ್ಪಿಸಿ ಬಟನ್ ಕ್ಯಾಮರಾ, ಡಿವೈಸ್ ಡಾಂಗಲ್, ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಪರೀಕ್ಷಾ ಮೇಲ್ವಿಚಾರಕರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ತುಮಕೂರು ನಗರದ ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಘಟನೆ ನಡೆದಿದ್ದು, ಪರೀಕ್ಷಾ ಮೇಲ್ವಿಚಾರಕಿಯಾಗಿದ್ದ ಶ್ಯಾಮಾ ಸೈಯದಿ ಅವರಿಂದ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸದ್ಯ ಧರ್ಮೆಂದ್ರನನ್ನ ವಶಕ್ಕೆ ಪಡೆದ ತಿಲಕ್ ಪಾರ್ಕ್ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಅಂದಹಾಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿಯಿದ್ದ 150 ಪಿಡಿಓ ಗಳಿಗೆ ನೇಮಕಾತಿ ಪರೀಕ್ಷೆ ನಡೆಸಲಾಗಿದ್ದು, ಇಂದು ತುಮಕೂರು ಸೇರಿದಂತೆ ರಾಜ್ಯದ ಒಟ್ಟು 1035 ಪರೀಕ್ಷಾ ಕೇಂದ್ರದಲ್ಲಿ ನೇಮಕಾತಿ ಪರೀಕ್ಷೆ ನಡೆಸಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx