ಪಾವಗಡ: ತಾಲೂಕಿನ ಪೋತಗಾನಹಳ್ಳಿ ಗ್ರಾಮಪಂಚಾಯಿತಿಯ ಪಿಡಿಓ ಮತ್ತು ಕಂಪ್ಯೂಟರ್ ಸಿಬ್ಬಂದಿ ಕಚೇರಿಗೆ ಸರಿಯಾದ ಸಮಯಕ್ಕೆ ಹಾಜರಾಗುತ್ತಿಲ್ಲ. ಹೀಗಾಗಿ ಇಲ್ಲಿನ ವಾಟರ್ ಮ್ಯಾನ್ ಕಂಪ್ಯೂಟರ್ ನಲ್ಲಿ ಕೆಲಸ ಮಾಡುತ್ತಾ, ಹಾಜರಾತಿ ಹಾಕಿಸುತ್ತಿರುವ ದೃಶ್ಯ ವೈರಲ್ ಆಗಿದೆ.
ಪಾವಗಡ ತಾಲೂಕಿನ ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಸಾರ್ವಜನಿಕರು ತಮ್ಮ ಕೆಲಸಗಳನ್ನ ಮಾಡಿಸಿಕೊಳ್ಳಬೇಕಾದರೆ ತಿಂಗಳುಗಳ ಕಾಲ ಸುತ್ತಾಡಿ ಪರದಾಡುವಂತಾಗಿದೆ. ಅಧಿಕಾರಿಗಳು ಸರಿಯಾದ ಸಮಯಕ್ಕೆ ಕಚೇರಿಯಲ್ಲಿ ಹಾಜರಾಗದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎನ್ನುವ ಆರೋಪಗಳ ನಡುವೆಯೇ ಈ ವಿಡಿಯೋ ವೈರಲ್ ಆಗಿದೆ.
ಅಧಿಕಾರಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಬಾರದ ಹಿನ್ನೆಲೆ ವಾಟರ್ ಮ್ಯಾನ್ ಗಳು ಹಾಜರಾತಿ ಹಾಕುವ ಕೆಲಸ ಮಾಡುವಂತಾಗಿದೆ. ಕಂಪ್ಯೂಟರ್ ಆಪರೇಟರ್ ಆಗಿ ಹನುಮೇಶ್ ಎಂಬವರು ಕೆಲಸ ಮಾಡ್ತಾ ಇದ್ದಾರೆ. ಆದ್ರೆ ಅವರು ಕೂಡ ಸರಿಯಾದ ಸಮಯಕ್ಕೆ ಹಾಜರಾಗದೇ ವಾಟರ್ ಮ್ಯಾನ್ ಗಳು ಕೆಲಸ ಮಾಡಿ ಇವರನ್ನು ಸಾಕುವಂತಾಗಿದೆ ಎನ್ನುವ ಮಾತು ಕೇಳಿ ಬಂದಿದೆ.
ಪೋತಗಾನಹಳ್ಳಿ ಪಿಡಿಓ ಮತ್ತು ಕಂಪ್ಯೂಟರ್ ಆಪರೇಟರ್ ಇಬ್ಬರು ಸೇರಿಕೊಂಡು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ, ತಮಗೆ ಇಷ್ಟ ಬಂದ ಹಾಗೆ ನಡೆಕೊಳ್ಳುತ್ತಿದ್ದು ಇವರ ವರ್ತನೆಗೆ ಸಾರ್ವಜನಿಕರು ಮತ್ತು ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ನಮ್ಮ ಕೆಲಸಗಳು ಪೆಂಡಿಂಗ್ ಆಗ್ತಾ ಇದೆ, ಇಂತಹ ಅಧಿಕಾರಿಗಳನ್ನು ಅಮಾನತು ಮಾಡಿ, ಜನಪರ ಕೆಲಸ ಮಾಡುವ ಅಧಿಕಾರಿಗಳನ್ನು ನೇಮಕ ಮಾಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


