nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026
    Facebook Twitter Instagram
    ಟ್ರೆಂಡಿಂಗ್
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    • ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ
    • ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ
    • ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ
    • ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವಚ್ಚ ಪರಿಸರದಿಂದ ನೆಮ್ಮದಿಯ ಬದುಕು: ತರುನ್ನಂ ನಿಖತ್
    ತುಮಕೂರು June 5, 2024

    ಸ್ವಚ್ಚ ಪರಿಸರದಿಂದ ನೆಮ್ಮದಿಯ ಬದುಕು: ತರುನ್ನಂ ನಿಖತ್

    By adminJune 5, 2024No Comments2 Mins Read
    parisara

    ತುಮಕೂರು: ನಮ್ಮ ಮನಸ್ಸು ಖುಷಿಯಾಗಿ ಇರಬೇಕಾದರೆ ನಮ್ಮ ಸುತ್ತಮುತ್ತಲಿನ ಪರಿಸರ ಸುಂದರವಾಗಿರಬೇಕು. ಸ್ವಚ್ಚ ಪರಿಸರದಿಂದ ಆರೋಗ್ಯ ವೃದ್ದಿ ಜೊತೆಗೆ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯೆ ತರುನ್ನಂ ನಿಖತ್ ಹೇಳಿದರು.

    ನಗರದಲ್ಲಿ ಬುಧವಾರ ಸರ್ಕಾರಿ ಚಿತ್ರಕಲಾ ಪದವಿ ಕಾಲೇಜು ಆಯೋಜಿಸಿದ್ದ ಪರಿಸರ ದಿನಾಚರಣೆ ಹಾಗೂ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


    Provided by
    Provided by

    ನಮ್ಮ ಸುತ್ತಲಿನ ಸುಂದರ ಪರಿಸರವನ್ನು ನಾವಿದ್ದಲ್ಲಿಯೇ ನಿರ್ಮಾಣ ಮಾಡಿಕೊಳ್ಳುವುದು ನಮ್ಮ ಜಾಣ್ಮೆಯಾಗಿರಬೇಕು. ನಾವು ಪರಿಸರ ಎಂದಾಕ್ಷಣ ಗಿಡಮರಗಳ ಬಗ್ಗೆ ಮಾತನಾಡುತ್ತೇವೆ. ಅದರಾಚೆಗೆ ಸ್ವಚ್ಛ ಪರಿಸರಕ್ಕೂ ನಾವು ಆದ್ಯತೆ ನೀಡಬೇಕಾಗಿದೆ. ಇವತ್ತು ವಿವಿಧ ಖಾಯಿಲೆಗಳು ಅಪ್ಪಳಿಸಿ ಎಳೆವಯಸ್ಸಿಗೆ ಜೀವ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿರುವುದು ಅಘಾತಕಾರಿ ವಿಷಯಗಳಲ್ಲೊಂದು. ಈ ನಿಟ್ಟಿನಲ್ಲಿ ನಾವು ಸ್ವಚ್ಚ ಪರಿಸರದಲ್ಲಿ ಬದುಕು ಕಟ್ಟಿಕೊಳ್ಳುತ್ತ ಮುಖಮಾಡಬೇಕಿದೆ. ಚಿತ್ರಕಲಾ ಪದವಿ ಕಾಲೇಜು ನಮ್ಮ ಕಟ್ಟಡದಲ್ಲಿ ಇರೋದ್ರಿಂದ ನಿಮ್ಮ ಕಲೆಯಿಂದ ನಮ್ಮ ಕಟ್ಟಡಕ್ಕೆ ಕಳೆ ಬಂದಿದೆ ಎಂದರು.

    ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪ್ರಾಚಾರ್ಯ ಕರಿಯಣ್ಣ ಮಾತನಾಡಿ, ತುಮಕೂರಿನಲ್ಲಿ ಸರ್ಕಾರಿ ಚಿತ್ರಕಲಾ ಕಾಲೇಜು ಇರೋದು ನಮ್ಮ ಹೆಮ್ಮೆ. ಕುಟುಂಬವನ್ನು ಪ್ರೀತಿಸಿದಷ್ಟೇ ಸಿಕ್ಕ ಉದ್ಯೋಗವನ್ನು ಪ್ರೀತಿಸಿ ಗೌರವಿಸುವ ಗುಣ ಬೆಳೆಸಿಕೊಳ್ಳಬೇಕಿದೆ ಎಂದು ಕಿವಿ ಮಾತು ಹೇಳಿದರು.

    ಕಾಳಜಿ ಫೌಂಡೇಶನ್ ಕಾನೂನು ಸಲಹೆಗಾರರಾದ ಶಿವಕುಮಾರ್ ಮೇಷ್ಟ್ರುಮನೆ ಮಾತನಾಡಿ,  ಸಮಾಜದ ಅಂಕುಡೊಂಕುಗಳನ್ನು ಚಿತ್ರಗಳ ಮೂಲಕ ತಿದ್ದುವ ಕೆಲಸ ಚಿತ್ರಕಲಾವಿದರಿಂದ ಆಗಬೇಕಿದೆ. ಸೃಜನಶೀಲ ಕಲಾತ್ಮಕ ವಿಷಯದಲ್ಲಿ ಪದವಿ ಪಡೆಯುವುದು ಉತ್ತಮ. ಆದಷ್ಡು ಚಿತ್ರಕಲೆ ಶಿಕ್ಷಣ ಪಡೆದವರು ನಿರುದ್ಯೋಗದಿಂದ ದೂರ ಉಳಿಯಲಿದ್ದಾರೆ ಎಂಬುದಂತು ಸತ್ಯ. ಹಾಗಾಗಿ ಈಗಿನ ಯುವಕರು ಶಿಕ್ಷಣ ಆಯ್ಕೆ ಮಾಡಿಕೊಳ್ಳುವಾಗ ಮುಂದಾಲೋಚನೆ ಬಹಳ ಮುಖ್ಯ ಎಂದು ಸಲಹೆ ನೀಡಿದರು.

    ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಿ.ಎಲ್.ನಟರಾಜ್ ಮಾತನಾಡಿ, ಪರಿಸರ ದಿನಾಚರಣೆ ಇಂದಿನ ಒಂದು ದಿನಕ್ಕೆ ಸೀಮಿತವಾಗದೇ ಪ್ರತಿ ದಿನವೂ ಸ್ವಚ್ಚ ಪರಿಸರ, ಗಿಡ ನೆಡುವುದು, ಮರಗಳ ಸಂರಕ್ಷಣೆಯತ್ತ ನಾವು ಮುಖಮಾಡಬೇಕಿದೆ. ಕಲಾ ವಿದ್ಯಾರ್ಥಿಗಳು ಪರಿಸರಕ್ಕೆ ಸಂಬಂಧಿಸಿದಂತೆ ಚಿತ್ರಕೃತಿಗಳನ್ನು ರಚಿಸಿ ಪ್ರದರ್ಶನ ಮಾಡುವ ಮೂಲಕ ಮುನ್ನಲೆಗೆ ಬರಬೇಕಿದೆ ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿನ ಪ್ರಾಚಾರ್ಯ ಸಿ.ಸಿ.ಬಾರಕೇರ ಮಾತನಾಡಿ, ನನ್ನ ಊರು ಧಾರವಾಡ ಆಗಿದ್ದರೂ ಕೂಡ ಕಳೆದ ಹತ್ತು ವರ್ಷಗಳಿಂದ ಇದೇ ಕಾಲೇಜಿನಲ್ಲಿ ಉದ್ಯೋಗ ಮಾಡಿಕೊಂಡು ಬರುತ್ತಿದ್ದೇನೆ. ಆದರೆ ವಿವಿಯ ಆಡಳಿತ ಮಂಡಳಿಯ ಸಹಕಾರ ಪ್ರೋತ್ಸಾಹವನ್ನು ಮರೆಯಲು ಸಾಧ್ಯವಿಲ್ಲ. ಹಾಗೆಯೇ ಸ್ಥಳಿಯ ಸಂಘಟನೆಗಳು, ಹಳೆ ವಿದ್ಯಾರ್ಥಿ ಬಳಗದಿಂದ ಇಷ್ಟು ದಿನ ಯಾವುದೇ ತೊಂದರೆ ಇಲ್ಲದೆ ಕರ್ತವ್ಯ ನಿಭಾಯಿಸಿದ್ದೇವೆ. ಇದೀಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಮ್ಮ ಕಾಲೇಜು ಶಿಪ್ಟ್ ಆಗಿರುವುದರಿಂದ ಇನ್ನು ಹೆಚ್ಚಿನ ಕೆಲಸ ಮಾಡಲು ಸಾಧ್ಯವಾಗಲಿದೆ ಎಂದರು.

    ಕಾರ್ಯಕ್ರಮದಲ್ಲಿ ಕಾಳಜಿ ಫೌಂಡೇಶನ್ ನಿರ್ದೇಶಕ ಎಂ.ಎಸ್.ಗಣೇಶ್ ಮಾರನಹಳ್ಳಿ, ಉಪನ್ಯಾಸಕರಾದ ಡಾ.ಸುರೇಂದ್ರನಾಥ್, ಆರ್.ರಂಗಸ್ವಾಮಿ, ಡಾ.ಸಂತೋಷ್ ಕುಮಾರ್, ಡಾ.ಶ್ವೇತ ಡಿ.ಎಸ್, ಸತ್ಯನಾರಾಯಣ ಟಿ.ಎಸ್. ಉಪಸ್ಥಿತರಿದ್ದರು.

    ಕಳೆದ 30 ವರ್ಷಗಳಿಂದ ಸುಲಲಿತವಾಗಿ ಸಾಗಿಬಂದ ತುಮಕೂರಿನ ಚಿತ್ರಕಲಾ ಪದವಿ ಕಾಲೇಜು ಇಂದು ಎತ್ತರಕ್ಕೆ ಸಾಗುವತ್ತ ಹೆಜ್ಜೆ ಇಟ್ಟಿದೆ. ಪ್ರತ್ಯೇಕ ಕಟ್ಟಡದ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆ ಮಾಡಬೇಕಿದೆ. ಆದರೂ ಕಲಿಯುವ ಮನಸ್ಸಿಗೆ ಪ್ರಸ್ತುತ ಕಾಲೇಜು ಆಸರೆಯಾಗುತ್ತದೆ. ವಿದ್ಯಾರ್ಥಿಗಳು ಸಿಕ್ಕ ಅವಕಾಶದಲ್ಲಿ ಸಮಯವನ್ನು ವ್ಯರ್ಥ ಮಾಡದೇ ಉತ್ತಮ ಶಿಕ್ಷಣ ಪಡೆಯು ಕೆಲಸ ಮಾಡಬೇಕು.

    — ಪಿ.ಎಸ್.ಗ್ರಾಮ್ ಪುರೋಹಿತ್, ಹಿರಿಯ ಚಿತ್ರಕಲಾವಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ

    February 12, 2026

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳಿಸುತ್ತಿದ್ದಾರೆ ಎಂದು ಬಿಜೆಪಿ…

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026

    ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ

    February 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.