ಗುಬ್ಬಿ: ತುಮಕೂರು ಜಿಲ್ಲೆಯ ಪೆದ್ದನಹಳ್ಳಿಯಲ್ಲಿ ಎಸ್ ಸಿ ಹಾಗೂ ಎಸ್ ಟಿ ಯುವಕರ ಜೋಡಿ ಕೊಲೆಯನ್ನು ಖಂಡಿಸಿ, ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯಿಸಿ ಪಾವಗಡ ಪಟ್ಟಣದ ತಹಸೀಲ್ದಾರ್ ಕಚೇರಿ ಮುಂದೆ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯನ್ನುದ್ದೇಶಿಸಿ ದಲಿತ ಮುಖಂಡ ಡಿ.ಜೆ.ಎಸ್. ನಾರಾಯಣಪ್ಪ ಮಾತನಾಡಿ, ಕೊಲೆಗಡುಕರನ್ನು ಕೂಡಲೇ ಸರ್ಕಾರ ಪೊಲೀಸ್ ಇಲಾಖೆ ಬಂಧಿಸಬೇಕು. ತನಿಖೆಯನ್ನು ಸಿಐಡಿಗೆ ನೀಡಬೇಕು ಹಾಗೂ ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ 25 ಲಕ್ಷ ರೂಪಾಯಿಗಳನ್ನು ಪರಿಹಾರ ನೀಡಿ. ಕುಟುಂಬದ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಮತ್ತು ಮಕ್ಕಳ ಉನ್ನತ ಶಿಕ್ಷಣ ನೀಡಲು ಸರ್ಕಾರ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ದಲಿತ ಮುಖಂಡ ಕಡಲಕೆರೆ ಹನುಮಂತರಾಯಪ್ಪ ಮಾತನಾಡಿ, ಮೃತರ ಕುಟುಂಬಕ್ಕೆ 5 ಎಕರೆ ಜಮೀನು ನೀಡಬೇಕು. ಗಂಗಾ ಕಲ್ಯಾಣ ಯೋಜನೆಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಬೇಕು. ಕುಟುಂಬಕ್ಕೆ ವಸತಿ ಯೋಜನೆಯಲ್ಲಿ ಮನೆ ಮಂಜೂರು ಮಾಡಬೇಕೆಂದು ಒತ್ತಾಯಿಸಿದರು.
ಗುಬ್ಬಿ ತಾಲ್ಲೂಕು ಪೆದ್ದನಹಳ್ಳಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಪಿ.ಎಂ. ಗಿರೀಶ್ ಹಾಗೂ ಮಂಚಲದೊರೆ ಗ್ರಾಮದ ಪರಿಶಿಷ್ಟ ಪಂಗಡಕ್ಕೆ ಸೇರಿದ ಗಿರೀಶ್ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದೀಗ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನಗಳು ನಡೆಯುತ್ತಿರುವ ಕುರಿತು ಭಾರೀ ಚರ್ಚೆಗಳು ಆರಂಭವಾಗಿದ್ದು, ಇದೀಗ ದಲಿತ ಸಂಘಟನೆಗಳು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯಮಟ್ಟದಲ್ಲಿ ಪ್ರತಿರೋಧ ಕಂಡು ಬರುವ ಸಾಧ್ಯತೆಗಳು ಕಂಡು ಬಂದಿದೆ.
ಪ್ರತಿಭಟನೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮುಖಂಡರುಗಳಾದ ಬೋವಿ ಸಮಾಜದ ಬಂಗಾರಪ್ಪ, ವಕೀಲರಾದ ಶೇಷ ನಂದನ್ , ಎ.ಪಿ.ಎಂ.ಸಿ. ಶಿವಮೂರ್ತಿ, ಪ್ರಾಂಶುಪಾಲರಾದ ಮಾರಪ್ಪ, ಶಿಕ್ಷಕರ ಸಂಘದ ನಿರ್ದೇಶಕರಾದ ರಾಮಾಂಜನೇಯ, ಪಾಳೇಗಾರ್ ಲೋಕೇಶ್.ಆರ್.ಎನ್., ಲಿಂಗಪ್ಪ ಗ್ರಾಮ ಪಂಚಾಯಿತಿ ಸದಸ್ಯ ಲಿಂಗ ನಾಯಕ ಮಂಜುನಾಥ್ , ಮುಖಂಡರಾದ ವಳ್ಳೋರು ನಾಗೇಶ್, ರಾಜೇಶ್ ಕೆ.ಟಿ .ಹಳ್ಳಿ, ರಮೇಶ್ ಬಾಬು ರಾಥೋಡ್, ರೋಪಿತಾಶ್ವನಾಯ್ಕ, ಗೋವಿಂದ ನಾಯ್ಕ, ವೆಂಕಟನಾಯ್ಕ, ಹನುಮಂತರಾಯ, ಬಿ.ಎಸ್.ಪಿ. ಭಾಸ್ಕರ ನಾಯಕ, ಅನಂತಯ್ಯ, ಓಂಕಾರ್ ನಾಯಕ, ಕನ್ನಡಿ ಮೇಡಿ ಸುರೇಶ್, ಮುಖಂಡರಾದ ಅಂಬಿಕಾ ರಮೇಶ್, ಸರೋಜಮ್ಮ ಪಾವಗಡ, ಬಲರಾಮ್ ಬೆಳ್ಳಿಬಟ್ಟಲು, ಈರಣ್ಣ ಕೆ.ಟಿ.ಹಳ್ಳಿ ಮುಂತಾದವರು ಭಾಗವಹಿಸಿದ್ದರು.
ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5