ತುಮಕೂರು: ಜಿಲ್ಲೆಯ ಗುಬ್ಬಿ ತಾಲೂಕಿನ ದಲಿತ ಯುವಕರ ಜೋಡಿ ಕೊಲೆಗಳನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ತುಮಕೂರು ಜಿಲ್ಲಾ ಶಾಖೆ ವತಿಯಿಂದ ತುಮಕೂರು ಚಲೋ ಬೃಹತ್ ಕಾಲ್ನಡಿಗೆ ಜಾಥಾ ಮೇ 23 ರಂದು ಆರಂಭವಾಗಲಿದೆ.
ಅಂದು ಬೆಳಗ್ಗೆ 9 ಗಂಟೆಗೆ ಗುಬ್ಬಿ ಪ್ರವಾಸಿ ಮಂದಿರದಿಂದ ಕಾಲ್ನಡಿಗೆ ಜಾಥಾ ಪ್ರಾರಂಭಗೊಂಡು ಮರುದಿನ ಮೇ 24ರಂದು ಬೆಳಗ್ಗೆ ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಕಾಲ್ನಡಿಗೆ ಜಾಥಾ ನಡೆಯಲಿದೆ.
ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಇತ್ತೀಚೆಗೆ ಎಸ್ ಸಿ ಸಮುದಾಯದ ಪೆದ್ದನಹಳ್ಳಿಯ ಎಂ.ಪಿ.ಗಿರೀಶ್ ಹಾಗೂ ನಾಯಕ ಸಮುದಾಯದ ಮಂಚಲದೊರೆಯ ಗಿರೀಶ್ ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ.
ಈ ಘೋರ ಹತ್ಯೆಯನ್ನು ಉನ್ನತಮಟ್ಟದಲ್ಲಿ ತನಿಖೆ ನಡೆಸಬೇಕು ಎಂದು ರಾಜ್ಯದ ವಿವಿಧ ದಲಿತ ಸಂಘಟನೆಗಳು ಒತ್ತಾಯಿಸಿದ್ದು, ಇದೀಗ ತುಮಕೂರಿಗೆ ಸೀಮಿತವಾಗಿರುವ ಪ್ರತಿಭಟನೆ ಇತರ ಜಿಲ್ಲೆಗಳಿಗೂ ಹಬ್ಬುವ ಸಾಧ್ಯತೆಗಳಿವೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5